Breaking News

ಶ್ರೀಗಂಧದ ಮರ ಕಳ್ಳತನದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ವ್ಯಕ್ತಿಗಳು ಸಾವು

ಚಿತ್ರದುರ್ಗ: ಶ್ರೀಗಂಧದ ಮರ ಕಳ್ಳತನದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಕೃಷ್ಣಾಪುರ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಮಧ್ಯಪ್ರದೇಶ ಮೂಲದ ಮೋಹಿತ್(24), ಕತರ್ವ (38) ಎಂದು ಗುರುತಿಸಲಾಗಿದೆ. ಸಾವನ್ನಪ್ಪಿರುವ ವ್ಯಕ್ತಿಗಳು ಕೃಷ್ಣಾಪುರ ಗ್ರಾಮದ ಜಯರಾಂ ಎಂಬುವವರ ಅಡಿಕೆ ತೋಟಕ್ಕೆ ತೆರಳಿದ್ದ ವೇಳೆ ಈ ಘಟನೆ ನಡೆದಿದೆ.
ಜಯರಾಂ ಅಡಿಕೆ ತೋಟದಲ್ಲಿ ಕೆಲ ಶ್ರೀಗಂಧದ ಮರಗಳಿದ್ದು, ಕಳ್ಳತನಕ್ಕೆ ಆಗಮಿಸಿದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಅಬ್ಬಿನಹೊಳೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *