Breaking News

ನವೆಂಬರ್ 1 ರಂದು ಸಾರ್ವಜನಿಕ ರಜೆ ಘೋಷಿಸಿದ ತಮಿಳುನಾಡು ಸರ್ಕಾರ

ತಮಿಳುನಾಡು: ಈ ವರ್ಷ ದೀಪಾವಳಿ ಹಬ್ಬವನ್ನು ತಮಿಳುನಾಡಿನಲ್ಲಿ ಅಕ್ಟೋಬರ್ 31 ರಂದು ಆಚರಿಸಲಾಗುತ್ತಿದೆ ಅಕ್ಟೋಬರ್ 31 ಗುರುವಾರದ ಕಾರಣ, ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಸರ್ಕಾರಿ ಅಧಿಕಾರಿಗಳು ತಮ್ಮ ಊರುಗಳಿಗೆ ಹೋಗಲು ಅನುಕೂಲವಾಗುವಂತೆ ತಮಿಳುನಾಡು ಸರ್ಕಾರ ನವೆಂಬರ್ 1 ರಂದು ಸಾರ್ವಜನಿಕ ರಜೆ ಘೋಷಿಸಿದೆ.
ಈ ಕುರಿತು ತಮಿಳುನಾಡು ಸರ್ಕಾರ ಅಧಿಕೃತ ಪ್ರಕಟಣೆ ಹೊರಡಿಸಿದ್ದು, ನವೆಂಬರ್‌ 1ರಂದು ಸಂಪೂರ್ಣ ರಜೆ ಎಂದು ಘೋಷಿಸಿದೆ.
ಈ ಕುರಿತು ಸರ್ಕಾರ ಹೊರಡಿಸಿರುವ ಪ್ರಕಟಣೆಯಲ್ಲಿ, ಈ ವರ್ಷದ ದೀಪಾವಳಿಯನ್ನು ಅಕ್ಟೋಬರ್‌ 31, 2024ರಂದು ಆಚರಿಸಲು ವಿದ್ಯಾರ್ಥಿಗಳು, ಅವರ ಪೋಷಕರು, ಶಿಕ್ಷಕರು ಮತ್ತು ಸರ್ಕಾರಿ ಅಧಿಕಾರಿಗಳ ಹಿತದೃಷ್ಟಿಯಿಂದ ಸ್ವಗ್ರಾಮ ತೆರಳಿದ್ದಾರೆ. ಇವರುಗಳ ಮನವಿಯ ಮೇರೆಗೆ ಎಲ್ಲಾ ಸರ್ಕಾರಿ ಕಚೇರಿಗಳು, ಸಾರ್ವಜನಿಕ ವಲಯದ ಸಂಸ್ಥೆಗಳಿಗೆ ನವೆಂಬರ್‌ 1ರಂದು ತಮಿಳುನಾಡಿನಾದ್ಯಂತ ಶಾಲೆಗಳನ್ನು ಒಂದು ದಿನದ ಮಟ್ಟಿಗೆ ರಜೆ ಘೋಷಣೆ ಮಾಡಲಾಗಿದೆ. ತಮಿಳುನಾಡು ಸರ್ಕಾರವು ಕಾಲೇಜುಗಳು ಮತ್ತು ಶಿಕ್ಷಣ ಸಂಸ್ಥೆಗಳಿಗೆ ರಜೆ ನೀಡಲು ಆದೇಶಿಸಿದೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *