Breaking News

ಲಾರಿ ಮತ್ತು ಆಟೋ ಮಧ್ಯೆ ಭೀಕರ ಅಪಘಾತ: ಮೂವರು ಸಾವು

ಧಾರವಾಡ: ಲಾರಿ ಮತ್ತು ಅಟೋ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಆಟೋದಲ್ಲಿದ್ದ ಮೂವರು ಸಾವನ್ನಪ್ಪಿದ್ದು, ಮೂವರಿಗೆ ಗಂಭೀರವಾದ ಗಾಯಗಳಾದ ಘಟನೆ ಧಾರವಾಡದ ಸಂಪಿಗೆನಗರ ಬಳಿ ಇಂದು ಬೆಳಗ್ಗೆ ನಡೆದಿದೆ.
ಆಟೋ ಚಾಲಕ ರಮೇಶ ಹಂಚನಿಮನಿ(35), ಮರೆವ್ವ ಹಂಚಿನಮನಿ(55) ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ 6 ವರ್ಷದ ಮಗು ಕೂಡ ಸಾವನ್ನಪ್ಪಿದೆ.
ಗಾಯಾಳುಗಳಾದ ರೇಣುಕಾ, ಪ್ರಣವ ಮತ್ತು ಪೃತ್ವಿ ಇಬ್ಬರಿಗೆ ಗಾಯಗಳಾಗಿದ್ದು, ಕಿಮ್ಸ್‌ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೃತರೆಲ್ಲರೂ ಕೆಲಗೇರಿ ಗ್ರಾಮದವರಾಗಿದ್ದಾರೆ.
ಘಟನಾ ಸ್ಥಳಕ್ಕೆ ಸಂಚಾರಿ ಪೋಲಿಸ್ ಠಾಣೆಯ ಸಿಪಿಐ ಶ್ರಿನಿವಾಸ ಮೇಟಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಂಚಾರಿ ಪೋಲಿಸರು ಲಾರಿ ಚಾಲಕನನ್ನ ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧ ಧಾರವಾಡ ಸಂಚಾರಿ ಪೋಲಿಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ.
ಬಿಡಾಡಿ ದನಗಳಿಂದ ಅಪಘಾತವಾಗಿದೆ ಎಂದು ಕೆಲಗೇರಿ ಗ್ರಾಮಸ್ಥರು ಆರೋಪಿಸಿದ್ದಾರೆ. ಬಿಡಾಡಿ ದನಗಳನ್ನು ರೋಡಿಗೆ ಬಿಟ್ಟ ಮಾಲೀಕರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಸ್ಥಳಕ್ಕೆ ಜಿಲ್ಲಾಧಿಕಾರಿಗಳು, ಪೋಲಿಸ್ ಕಮಿಷನರ್ ಬರಬೇಕು ಎಂದು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಅಲ್ಲಲ್ಲಿ ರೋಡ್ ಹಂಪ್‌ಗಳನ್ನ ಹಾಕಬೇಕು ಎಂದು ಕೆಲಗೇರಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *