Breaking News

ಪ್ರಧಾನಿ ಮೋದಿಯಿಂದ ವಾರಣಾಸಿಯಲ್ಲಿ ಶಂಕರ ನೇತ್ರಾಲಯ ಸೇರಿ ವಿವಿಧ ಯೋಜನೆಗಳಿಗೆ ಚಾಲನೆ

ಲಕ್ನೋ: ಪ್ರಧಾನಿ ನರೇಂದ್ರ ಮೋದಿ ಅವರು ವಾರಣಾಸಿಯಲ್ಲಿ ಆರ್‌ಜೆ ಶಂಕರ ನೇತ್ರಾಲಯ ಸೇರಿ ಬಹು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು.
ಆರ್‌ಜೆ ಶಂಕರ ಕಣ್ಣಿನ ಆಸ್ಪತ್ರೆಯು ವಿವಿಧ ಕಣ್ಣಿನ ಕಾಯಿಲೆಗಳಿಗೆ ಸಮಗ್ರ ಸಮಾಲೋಚನೆ ಮತ್ತು ಚಿಕಿತ್ಸೆಯನ್ನು ನೀಡುತ್ತದೆ.
ಕಂಚಿ ಮಠದಿಂದ ನಡೆಸಲ್ಪಡುತ್ತಿರುವ ಆರ್‌ಜೆ ಶಂಕರ ಕಣ್ಣಿನ ಆಸ್ಪತ್ರೆಯು ಪೂರ್ವ ಉತ್ತರ ಪ್ರದೇಶದ 20 ಜಿಲ್ಲೆಗಳ ಜನರಿಗೆ ಮತ್ತು ಬಿಹಾರ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದ ಗಡಿ ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ಪ್ರಯೋಜನವನ್ನು ನೀಡುತ್ತದೆ.
ಇದು ಕಂಚಿಮಠದ ದೇಶದ 14ನೇ ಆಸ್ಪತ್ರೆಯಾಗಿದೆ ಪ್ರತಿ ವರ್ಷ 30,000 ಉಚಿತ ನೇತ್ರ ಶಸ್ತ್ರಚಿಕಿತ್ಸೆ ನಡೆಸುವ ಗುರಿ ಹೊಂದಿದೆ.
ಮುಂಜಾನೆ ಲಾಲ್ ಬಹದ್ದೂರ್ ಶಾಸ್ತ್ರಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮೋದಿ ಅವರನ್ನು ರಾಜ್ಯಪಾಲ ಆನಂದಿಬೆನ್ ಪಟೇಲ್ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸ್ವಾಗತಿಸಿದರು.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *