Breaking News

ಅನಧಿಕೃತ ಹೋಮ್ ಸ್ಟೇಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಚಿವ ಮಂಕಾಳ ವೈದ್ಯ ಸೂಚನೆ

ಕಾರವಾರ: ಜಿಲ್ಲೆಯ ಎಲ್ಲ ಹೋಮ್ ಸ್ಟೇಗಳ ಪರಿಶೀಲನೆ ನಡೆಸಿ, ಸರ್ಕಾರದ ಮಾರ್ಗಸೂಚಿ ಪಾಲಿಸುತ್ತಿರುವ ಬಗ್ಗೆ ವರದಿ ಸಲ್ಲಿಸಬೇಕು ಅನಧಿಕೃತವಾಗಿರುವ ಹೋಮ್ ಸ್ಟೇಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಸೂಚಿಸಿದರು.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ಅನಧಿಕೃತ ಹೋಮ್ ಸ್ಟೇಗಳ ಹಾವಳಿ ನಿಯಂತ್ರಣಕ್ಕೆ ಕ್ರಮವಹಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲೆಯ ಕಡಲತೀರಗಳಲ್ಲಿ ಪ್ರವಾಸಿಗರ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಿ, ಗರಿಷ್ಠ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಜೀವರಕ್ಷಕ ಸಿಬ್ಬಂದಿಗೆ ಲೈಫ್ ಜಾಕೆಟ್ ಸೇರಿದಂತೆ ಅಗತ್ಯ ಸುರಕ್ಷತಾ ಸಾಮಗ್ರಿ ಪೂರೈಕೆಗೆ ತುರ್ತು ಕ್ರಮವಹಿಸಬೇಕು. ಜೀವರಕ್ಷಕ ಸಿಬ್ಬಂದಿಯ ಜತೆಗೆ ಪೊಲೀಸ್ ಸಿಬ್ಬಂದಿಯನ್ನೂ ನಿಯೋಜಿಸಬೇಕು ಎಂದು ಹೇಳಿದರು.
ಪ್ರತಿ ಕಡಲತೀರಗಳಿಗೆ ಅಗತ್ಯವಿರುವಷ್ಟು ಸಂಖ್ಯೆಯ ಜೀವ ರಕ್ಷಕರನ್ನು ಹಾಗೂ ಮೇಲ್ವಿಚಾರಕರನ್ನು ನೇಮಕ ಮಾಡಬೇಕು. ಪ್ರತಿ ಜೀವ ರಕ್ಷಕರಿಗೆ, ಅವರು ಕಾರ್ಯನಿರ್ವಹಿಸಬೇಕಾದ ನಿರ್ದಿಷ್ಟ ಸ್ಥಳವನ್ನು ಹಂಚಿಕೆ ಮಾಡಿ ಆ ಪ್ರದೇಶದಲ್ಲಿ ಪ್ರವಾಸಿಗರಿಗೆ ಯಾವುದೇ ಅಪಾಯವಾಗದಂತೆ ನಿರಂತರವಾಗಿ ನಿಗಾ ವಹಿಸುವಂತೆ ಸೂಚನೆ ನೀಡಬೇಕು ಎಂದರು.
ಹೊನ್ನಾವರದ ಶರಾವತಿ ನದಿಯಲ್ಲಿ ಬೋಟಿಂಗ್ ಚಟುವಟಿಕೆಗಳ ಬಗ್ಗೆ ಸುರಕ್ಷತಾ ಕ್ರಮಗಳ ಕುರಿತು ಪರಿಶೀಲಿಸಬೇಕು. ಜಿಲ್ಲೆಯಲ್ಲಿ ಹೊಸ ಪ್ರವಾಸೋದ್ಯಮ ಚಟುವಟಿಕೆಗಳಿಗೆ ಅನುಮತಿ ನೀಡುವ ಮುನ್ನ ಕಡ್ಡಾಯವಾಗಿ ಜಿಲ್ಲಾಧಿಕಾರಿ ಅಧ್ಯಕ್ಷತೆ ಸಭೆಯಲ್ಲಿ ಪರಿಶೀಲಿಸಿ ಅನುಮತಿ ನೀಡಬೇಕು ಎಂದರು.
ಮುರುಡೇಶ್ವರದಲ್ಲಿ ₹360 ಕೋಟಿ ವೆಚ್ಚದಲ್ಲಿ ಬಂದರು ನಿರ್ಮಾಣ ಮಾಡಲಾಗುವುದು. ಇದರಿಂದ ಕ್ರೂಸ್‌ಗಳ ಮೂಲಕ ಪ್ರವಾಸಿಗರು ಜಿಲ್ಲೆಯ ವಿವಿಧ ಪ್ರವಾಸಿ ತಾಣಗಳಿಗೆ ಆಗಮಿಸಲು ಸಾಧ್ಯವಾಗಲಿದೆ ಎಂದರು.

Share News

About bigtvnews22

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *