Breaking News

ಈ ಭಾರಿಯ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಹೆಚ್ಚು ಚರ್ಚೆಗಳಾಗಬೇಕು: ಬೆಲ್ಲದ

ಹುಬ್ಬಳ್ಳಿ: ಡಿ.9 ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ. ಈ ಸಂದರ್ಭದಲ್ಲಿ ಉತ್ತರ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗೆ ಒತ್ತಾಯಿಸಲಾಗುವುದು. ಇದರೊಂದಿಗೆ ಕಳೆದ ಭಾರಿ ಅಧಿವೇಶನದಲ್ಲಿ ನಡೆಸಿದ ಚರ್ಚೆ ನಡೆಸಿ ತೆಗೆದುಕೊಂಡ ನಿರ್ಧಾರಗಳನ್ನು ಪಟ್ಟಿಮಾಡಿ ಅವುಗಳಲ್ಲಿ ಎಷ್ಟು ಜಾರಿಯಾಗಿವೆ ಎಂಬುದನ್ನು ಸಿಎಂ ಜನರಿಗೆ ತಿಳಿಸಬೇಕು ಎಂದು ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಒತ್ತಾಯಿಸಿದರು.

ನಗರದಲ್ಲಿಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಅದರಂತೆ ಈ ಭಾರಿಯ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಹೆಚ್ಚು ಚರ್ಚೆಗಳಾಗಬೇಕು. ಉತ್ತಮ ಕರ್ನಾಟಕ ಭಾಗಕ್ಕೆ ಯಾವುದೇ ಒಂದು ಯೋಜನೆ ತರಬೇಕಾದರೇ ಹೋರಾಟ ಮಾಡಿ ತರುವ ಪರಿಸ್ಥಿತಿ ಇಂದಿಗೂ ಮುಂದುವರೆದಿದೆ. ಇದು ದುರ್ದೈವದ ಸಂಗತಿ ಎಂದು ತಿಳಿಸಿದರು.

Share News

About Shaikh BigTv

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *