Breaking News

ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಭರತ್ ಅವರಿಗೆ ಟಿಕೆಟ್ ನೀಡಲಾಗಿದೆ: ಬೆಲ್ಲದ

ಹುಬ್ಬಳ್ಳಿ : ಶಿಗ್ಗಾಂವಿ-ಸವಣೂರು ವಿಧಾನಸಭಾ ಮತಕ್ಷೇತ್ರದಲ್ಲಿ ಸಂಸದ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಗೆ ಟಿಕೆಟ್ ನೀಡಿರುವ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ವಿಧಾನಸಭಾ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಪ್ರತಿಕ್ರಿಯೆ ನೀಡಿದ್ದಾರೆ.

ಬಿಜೆಪಿ ಎಂದಿಗೂ ವಂಶ ಪಾರಂಪರಿಕ ಪಕ್ಷವಲ್ಲ. ನಮ್ಮದು ಪ್ರಜಾಪ್ರಭುತ್ವ ಸಿದ್ಧಾಂತದ ಅಡಿಯಲ್ಲಿ ಕೆಲಸ ಮಾಡುವ ಪಕ್ಷ. ಅಲ್ಲಿನ ಜನರ, ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಭರತ್ ಅವರಿಗೆ ಟಿಕೆಟ್ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು.

ಚನ್ನಪಟ್ಟಣ ಉಪಚುನಾವಣೆಗೆ ಸಂಬಂಧಿಸಿದಂತೆ ಮಾತನಾಡಿ, ಅಲ್ಲಿ ಎನ್.ಡಿ.ಎ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ ಸ್ಪರ್ಧೆ ಮಾಡಿದ್ರೆ ಉತ್ತಮ. ಈ ಹಿಂದೆ ಲೋಕಸಭೆ ಚುನಾವಣೆಯಲ್ಲಿ ಸಿ.ಪಿ.ಯೋಗೇಶ್ವರ ಅವರು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಎಚ್‌ಡಿಕೆ ಅವರು ಈ ವಿಷಯದಲ್ಲಿ ಅತಿಹೆಚ್ಚು ಜ್ಞಾನ ಹೊಂದಿದ್ದು, ಈ ಬಾರಿಯ ಚುನಾವಣೆಯಲ್ಲಿ ಸಿ.ಪಿ.ಯೋಗೇಶ್ವರ ಅವರಿಗೆ ಟಿಕೆಟ್ ಬಿಟ್ಟು ಕೊಟ್ಟರೆ ಒಳ್ಳೆಯದು ಎಂದರು.

Share News

About Shaikh BigTv

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *