Breaking News

ಲಾರಿ ಮತ್ತು ಆಟೋ ಮಧ್ಯೆ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು

ಧಾರವಾಡ: ಲಾರಿ ಮತ್ತು ಆಟೋ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಆಟೋದಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಧಾರವಾಡದ ಸಂಪಿಗೆನಗರದ ಬಳಿ ನಿನ್ನೆ ತಡರಾತ್ರಿ ಸಂಭವಿಸಿದೆ.

ಆಟೋ ಚಾಲಕ ರಮೇಶ ಹಂಚಿನಮನಿ (35) ಹಾಗೂ ಮರೆವ್ವ ಹಂಚಿನಮನಿ (55) ಎಂಬುವವರೇ ಈ ಅಪಘಾತದಲ್ಲಿ ಸಾವಿಗೀಡಾದ ದುರ್ದೈವಿಗಳು. ಆಟೋದಲ್ಲಿದ್ದ ರೇಣುಕಾ, ಪ್ರಣವ್ ಮತ್ತು ಪೃಥ್ವಿ ಎಂಬುವವರು ಈ ಘಟನೆಯಲ್ಲಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್‌ಗೆ ದಾಖಲಿಸಲಾಗಿದೆ.

ಪ್ರಯಾಣಿಕರನ್ನು ರೈಲು ನಿಲ್ದಾಣಕ್ಕೆ ಬಿಟ್ಟು ಬರಲು ಆಟೋ ಚಾಲಕ ಹೊರಟಿದ್ದ. ಈ ವೇಳೆ ಲಾರಿ ಡಿಕ್ಕಿ ಹೊಡೆದಿದ್ದು, ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಘಟನಾ ಸ್ಥಳಕ್ಕೆ ಧಾರವಾಡ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ದೂರು ದಾಖಲಿಸಿಕೊಂಡಿದ್ದಾರೆ.

Share News

About Shaikh BigTv

Check Also

ಇ-ಖಾತೆಗಾಗಿ ₹50 ಸಾವಿರ ಲಂಚಕ್ಕೆ ಬೇಡಿಕೆ; ಮೊದಲ ಕಂತು ಪಡೆಯುವಾಗ ನಗರಸಭೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಶಿಡ್ಲಘಟ್ಟ: ಇ-ಖಾತೆ ಮಾಡಿಕೊಡಲು ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹25,500 ಸ್ವೀಕರಿಸುತ್ತಿದ್ದ ನಗರಸಭೆಯ ಎಸ್‌ಡಿಎ ನಾಗರಾಜ್ …

Leave a Reply

Your email address will not be published. Required fields are marked *