Breaking News

ಜೂಜಾಟದಲ್ಲಿ ಅಬಕಾರಿ, ಬ್ಯಾಂಕ್ ಇಲಾಖೆಯ ಅಧಿಕಾರಿಗಳು ಭಾಗಿ: 9 ಮಂದಿಯ ಬಂಧನ

ಕೋಲಾರ: ಜಿಲ್ಲೆಯಲ್ಲಿ ಜೂಜಾಟದಲ್ಲಿ ಬ್ಯಾಂಕ್ ಅಧಿಕಾರಿ, ಅಬಕಾರಿ ಇಲಾಖೆಯ ಅಧಿಕಾರಿಗಳೇ ಭಾಗಿಯಾಗಿ ಬಂಧನಕ್ಕೆ ಒಳಗಾಗಿರುವಂತ ಘಟನೆ ಕೋಲಾರದ ಕಠಾರಿಪಾಳ್ಯದಲ್ಲಿ ನಡೆದಿದೆ. ಈ ಸಂಬಂಧ 9 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೋಲಾರ ನಗರದ ಕಠಾರಿಪಾಳ್ಯದಲ್ಲಿ ಜೂಜಾಟದಲ್ಲಿ ತೊಡಗಿರುವಂತ ಖಚಿತ ಮಾಹಿತಿ ಎಸ್ಪಿ ನಿಖಿಲ್ ಅವರಿಗೆ ಸಿಕ್ಕಿತ್ತು ಈ ಹಿನ್ನಲೆಯಲ್ಲಿ ಸಿಇಎನ್ ಠಾಣೆಯ ಪೊಲೀಸರು ದಾಳಿ ನಡೆಸಿ, ಬಂಧಿಸುವಂತೆ ಸೂಚಿಸಿದ್ದರು.
ಕೋಲಾರ ಎಸ್ಪಿ ಸೂಚನೆಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ದಾಳಿಯ ವೇಳೆಯಲ್ಲಿ ಮಾಲೂರು ಪಿಎಲ್ ಡಿ ಬ್ಯಾಂಕ್ ನ ಶ್ರೀನಿವಾಸ್, ಅಬಕಾರಿ ಇಲಾಖೆಯ ಬಾಲರಾಜ್ ಅವರು ಕೂಡ ಜೂಜಾಟದಲ್ಲಿ ತೊಡಗಿದ್ದಾಗ ಸಿಕ್ಕಿಬಿದ್ದಿದ್ದಾರೆ.
ಕೋಲಾರ ನಗರದ ಕಠಾರಿಪಾಳ್ಯದ ಮನೆಯೊಂದರಲ್ಲಿ ಜೂಜಾಟದಲ್ಲಿ ತೊಡಗಿದ್ದಂತ 9 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ 1.5 ಲಕ್ಷ ನಗರ, 1 ಕಾರು, 5 ಬೈಕ್ ಸೇರಿದಂತೆ ವಿವಿಧ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *