Breaking News

2 ಕ್ಕಿಂತ ಹೆಚ್ಚು ಮಕ್ಕಳಿದ್ದರೆ ಮಾತ್ರ ಚುನಾವಣೆಗಳಲ್ಲಿ ಸ್ಪರ್ಧೆಗೆ ಅವಕಾಶ: ಆಂಧ್ರ ಸಿಎಂ ನಾಯ್ಡು

ಅಮರಾವತಿ: ದಕ್ಷಿಣ ಭಾರತದ ರಾಜ್ಯಗಳಲ್ಲಿ ಯುವಜನರ ಪ್ರಮಾಣ ಕುಸಿಯುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿರುವ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ದೇಶದ ಹಿತಕ್ಕಾಗಿ ಹೆಚ್ಚು ಮಕ್ಕಳಿಗೆ ಜನ್ಮ ನೀಡುವಂತೆ ಮನವಿ ಮಾಡಿದ್ದಾರೆ. ಅಲ್ಲದೆ 2ಕ್ಕಿಂತ ಹೆಚ್ಚು ಮಕ್ಕಳಿದ್ದರೆ ಮಾತ್ರ ಸ್ಥಳೀಯ ಸಂಸ್ಥೆ ಚುನಾ ವಣೆಗಳಲ್ಲಿ ಸ್ಪರ್ಧೆ ಅವಕಾಶ ಒದಗಿಸುವ ಕಾನೂನು ಜಾರಿ ಮಾಡಲಾಗುತ್ತದೆ ಎಂದಿದ್ದಾರೆ.
2ಕ್ಕಿಂತ ಹೆಚ್ಚು ಮಕ್ಕಳಿದ್ದರೆ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಎಂಬ ಕಾನೂನು ಈಗ ಇದೆ ಈ ಕಾನೂನನ್ನು ರದ್ದು ಮಾಡಲಾಗುತ್ತದೆ. ಚುನಾವಣೆಗಳಲ್ಲಿ ಸ್ಪರ್ಧಿಸಲು 2ಕ್ಕಿಂತ ಹೆಚ್ಚು ಮಕ್ಕಳು ಕಡ್ಡಾಯ ಎಂಬ ನಿಯಮ ತರಲಾಗುತ್ತದೆ. ಅಲ್ಲದೆ ಹೆಚ್ಚು ಮಕ್ಕಳನ್ನು ಹೊಂದುವ ಕುಟುಂಬಗಳಿಗೆ ಹೆಚ್ಚಿನ ಅನುದಾನ ಮತ್ತು ಪ್ರೋತ್ಸಾಹವನ್ನು ನೀಡಲಾಗುತ್ತದೆ ಎಂದು ಅಮರಾವತಿಯಲ್ಲಿ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ ಅವರು ತಿಳಿಸಿದರು.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *