Breaking News

ದಸರಾ ರಜೆ ಅಂತ್ಯ: ರಾಜ್ಯಾದ್ಯಂತ ಇಂದಿನಿಂದ ಶಾಲೆಗಳು ಪುನರಾರಂಭ

ಬೆಂಗಳೂರು : ಅಕ್ಟೋಬರ್ 3 ರಿಂದ ಶಾಲಾ ಮಕ್ಕಳಿಗೆ ನೀಡಿದ್ದ ದಸರಾ ರಜೆ ಅಂತ್ಯಗೊಂಡಿದ್ದು ರಾಜ್ಯಾದ್ಯಂತ ಇಂದಿನಿಂದ ಶಾಲೆಗಳು ಪುನಾರಂಭಗೊಳ್ಳಲಿದೆ.
ದಸರಾ ಹಬ್ಬದ ಪ್ರಯುಕ್ತ ಸಾರ್ವಜನಿಕ ಶಿಕ್ಷಣ ಇಲಾಖೆ ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20ರವರೆಗೆ ದಸರಾ ರಜೆ ಘೋಷಣೆ ಮಾಡಿತ್ತು, ಒಟ್ಟು 17 ದಿನಗಳ ಕಾಲ ಶಾಲೆಗಳಿಗೆ ದಸರಾ ರಜೆಯನ್ನು ನೀಡಲಾಗಿತ್ತು. ಅಕ್ಟೋಬರ್ 21 ರ ಇಂದಿನಿಂದ ಶಾಲೆಗಳು ಮತ್ತೆ ಆರಂಭವಾಗಲಿವೆ.
2024-25ನೇ ಶೈಕ್ಷಣಿಕ ಸಾಲಿನ ದಸರಾ ರಜೆ ಅಕ್ಟೋಬರ್ 3 ರಿಂದ 20 ರವರೆಗೆ ಘೋಷಿಸಲಾಗಿತ್ತು. ಶಿಕ್ಷಣ ಇಲಾಖೆಯ ಆದೇಶದ ಪ್ರಕಾರ ಶಾಲಾ ವಿದ್ಯಾರ್ಥಿಗಳಿಗೆ ಒಟ್ಟು 17 ದಿನ ದಸರಾ ರಜೆ ನೀಡಲಾಗಿತ್ತು. ರಜೆಯ ಮಜಾ ನಿನ್ನೆಗೆ ಅಂತ್ಯಗೊಂಡಿದ್ದು, ರಾಜ್ಯಾದ್ಯಂತ ಇಂದಿನಿಂದ ಶಾಲೆಗಳು ಪುನಾರಂಭಗೊಳ್ಳಲಿದೆ. ಗಾಂಧಿ ಜಯಂತಿ ಕಾರ್ಯಕ್ರಮದ ಬಳಿಕ 2024-25ನೇ ದಸರಾ ರಜೆ ಆರಂಭವಾಗಿತ್ತು ಅಕ್ಟೋಬರ್ 21ರಿಂದ ಎರಡನೇ ಅವಧಿ ಆರಂಭವಾಗಲಿದ್ದು, 2025 ಏಪ್ರಿಲ್ 10 ರವರೆಗೆ ಶಾಲೆಗಳು ನಡೆಯಲಿವೆ ಎಂದು ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *