Breaking News

ಅ.25 ರಂದು ವಿವಿಧ ಸ್ಥಾಯಿ ಸಮಿತಿ ಚುನಾವಣೆ

ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ 23 ನೇ ಅವಧಿಗೆ ತೆರಿಗೆ ನಿರ್ಧರಣೆ ಹಣಕಾಸು ಮತ್ತು ಅಪೀಲುಗಳ ಸ್ಥಾಯಿ ಸಮಿತಿ, ಸಾರ್ವಜನಿಕ ಆರೋಗ್ಯ ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸಮಿತಿ, ನಗರ ಯೋಜನೆ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿ ಹಾಗೂ ಲೆಕ್ಕಗಳ ಸ್ಥಾಯಿ ಸಮಿತಿಗಳ ಅಧ್ಯಕ್ಷರ ಸ್ಥಾನಗಳಿಗೆ ಚುನಾವಣೆಯು ಅಕ್ಟೋಬರ್ 25 ರಂದು ಬೆಳಿಗ್ಗೆ 11 ಗಂಟೆಗೆ ಮಹಾನಗರ ಪಾಲಿಕೆಯ ಸಭಾಭವನದಲ್ಲಿ ನಡೆಯಲಿದೆ.

ಅಂದು ಬೆಳಿಗ್ಗೆ 9 ಗಂಟೆಯಿಂದ 11 ಗಂಟೆಯವರೆಗೆ 4 ಸ್ಥಾಯಿ ಸಮಿತಿಗಳ ಅಧ್ಯಕ್ಷರ ಸ್ಥಾನಗಳಿಗೆ ನಾಮಪತ್ರಗಳ ವಿತರಣೆ ಮತ್ತು ಸ್ವೀಕರಿಸುವುದು. ನಂತರ ನಾಮಪತ್ರಗಳ ಪರಿಶೀಲನೆ, ಕ್ರಮಬದ್ಧ ನಾಮಪತ್ರಗಳ ಘೋಷಣೆ, ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳುವುದು, ಉಮೇದುವಾರರ ಪಟ್ಟಿ ಘೋಷಣೆ, ಚುನಾವಣೆ ಅಗತ್ಯವಿದ್ದಲ್ಲಿ ಮತದಾನ, ಮತಗಳ ಎಣಿಕೆ ಹಾಗೂ ಫಲಿತಾಂಶ ಘೋಷಣೆ ಪ್ರಕ್ರಿಯೆಗಳು ಜರುಗಲಿವೆ ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾದ ಡಾ.ಈಶ್ವರ ಉಳ್ಳಾಗಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share News

About Shaikh BigTv

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *