Breaking News

ಜಾನುವಾರುಗಳಿಗೆ ತಗುಲಬಹುದಾದ ರೋಗಗಳ ಬಗ್ಗೆ ಮುಂಜಾಗ್ರತೆ ವಹಿಸಿ : ಡಾ.ಮನೋಹರ ದ್ಯಾಬೇರಿ

ನವಲಗುಂದ: ಜಾನುವಾರುಗಳಿಗೆ ತಗುಲಬಹುದಾದ ರೋಗಗಳ ಬಗ್ಗೆ ಮುಂಜಾಗ್ರತೆ ವಹಿಸಿ, ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಮುಖ್ಯ ಪಶುವೈದ್ಯಾಧಿಕಾರಿ ಡಾ.ಮನೋಹರ ದ್ಯಾಬೇರಿ ಸಲಹೆ ನೀಡಿದರು.

ತಾಲೂಕಿನ ಅಳಗವಾಡಿ ಗ್ರಾಮದಲ್ಲಿ ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಿಂದ ಹಮ್ಮಿಕೊಂಡಿದ್ದ ಕರುಗಳ ಪ್ರದರ್ಶನ ಹಾಗೂ ಜಾನುವಾರುಗಳ ಆರೋಗ್ಯ ಶಿಬಿರ ಉದ್ದೇಶಿಸಿ ಮಾತನಾಡಿದ ಅವರು ಪ್ರಸ್ತುತ ದಿನಗಳಲ್ಲಿ ಹೈನುಗಾರಿಕೆಗೆ ಹೆಚ್ಚು ಒತ್ತು ಸಿಗುತ್ತಿದೆ. ಹಾಲು ಉತ್ಪಾದನೆ, ಬರಡು ರಾಸುವಿಗೆ ಚಿಕಿತ್ಸೆ ಸೇರಿದಂತೆ ಜಾನುವಾರುಗಳ ಆರೈಕೆ ಬಗ್ಗೆ ರೈತರು ನಿರ್ಲಕ್ಷ್ಯ ತೋರಬಾರದು. ಹತ್ತಿರದ ಪಶು ಆಸ್ಪತ್ರೆಯಲ್ಲಿ ಕಾಲಕಾಲಕ್ಕೆ ಚಿಕಿತ್ಸೆ ಕೊಡಿಸಬೇಕು. ಗ್ರಾಮೀಣ ಪ್ರದೇಶದ ರೈತರ ಜೀವನಾಡಿಯಾಗಿರುವ ಜಾನುವಾರುಗಳಿಗಾಗಿ ಏರ್ಪಡಿಸುವ ಪಶು ಆರೋಗ್ಯ ತಪಾಸಣಾ ಶಿಬಿರಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಈ ವೇಳೆ ಹಿರಿಯ ಪಶು ವೈದ್ಯಾಧಿಕಾರಿಗಳಾದ ಡಾ.ಬಸವರಾಜ ಕರಿಬರಮಣ್ಣವರ, ಪಶು ವೈದ್ಯಧಿಕಾರಿಗಳಾದ ಡಾ.ದರ್ಶನ ಎಂ.ಬಿ, ಜಾನುವಾರು ಅಭಿರುದ್ದಿ ಅಧಿಕಾರಿಗಳಾದ ಸವಣೂರ.ಎಚ್ ಸೇರಿ ಇಲಾಖೆ ಸಿಬ್ಬಂದಿ ವರ್ಗ ಗ್ರಾಮ ಪಂಚಾಯತ ಸದಸ್ಯರು ಉಪಸ್ಥಿತರಿದ್ದರು.

Share News

About Shaikh BigTv

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *