Breaking News

ಟಿಕೆಟ್ ಹಂಚಿಕೆಯಲ್ಲಿ ಯಾವುದೇ ಗೊಂದಲ ಇಲ್ಲ: ಲಾಡ್

ಧಾರವಾಡ: ಶಿಗ್ಗಾಂವಿ, ಸಂಡೂರು ಹಾಗೂ ಚೆನ್ನಪಟ್ಟಣ ಉಪಚುನಾವಣೆಯ ಟಿಕೆಟ್ ಹಂಚಿಕೆಯಲ್ಲಿ ಹೈಕಮಾಂಡ್‌ ತೀರ್ಮಾನವೇ ಅಂತಿಮವಾಗಲಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.

ಧಾರವಾಡದಲ್ಲಿ ಮಾತನಾಡಿದ ಅವರು, ಟಿಕೆಟ್ ಹಂಚಿಕೆಯಲ್ಲಿ ಯಾವುದೇ ಗೊಂದಲ ಇಲ್ಲ. ನಿನ್ನೆ ಸಿಎಂ ಅವರು ಸಭೆ ಕರೆದು ಸಚಿವರು ಹಾಗೂ ಡಿಸಿಎಂ ಜೊತೆ ಚರ್ಚೆ ಮಾಡಿದ್ದಾರೆ. ನಾವೆಲ್ಲ ನಮ್ಮ ಅಭಿಪ್ರಾಯ ಮಂಡನೆ ಮಾಡಿದ್ದೇವೆ. ಇವತ್ತು ಅಥವಾ ನಾಳೆ ಹೈಕಮಾಂಡ್ ನಿಂದ ಅಂತಿಮ ತೀರ್ಮಾನ ಬರಲಿದೆ ಎಂದರು.

ಶಿಗ್ಗಾಂವಿ ಟಿಕೆಟ್ ಹಂಚಿಕೆಯಲ್ಲೂ ನಾವು ನಮ್ಮ ಅಭಿಪ್ರಾಯ ತಿಳಿಸಿದ್ದೇವೆ. ಕೊನೆಯದಾಗಿ ಹೈಕಮಾಂಡ್‌ನಿಂದ ಏನು ತೀರ್ಮಾನ ಮಾಡುತ್ತೋ ಅದೇ ಫೈನಲ್ ಎಂದರು.

ಸಿ.ಪಿ.ಯೋಗೇಶ್ವ‌ರ್ ಅವರನ್ನು ಕಾಂಗ್ರೆಸ್‌ಗೆ ಕರೆತರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಆ ಭಾಗದಲ್ಲಿ ನನಗೆ ಜಾಸ್ತಿ ಮಾಹಿತಿ ಇಲ್ಲ. ನಮ್ಮ ಅಧ್ಯಕ್ಷರಿಗೆ ಹಾಗೂ ಸಿಎಂಗೆ ಅಲ್ಲಿ ಹೆಚ್ಚಿನ ಜವಾಬ್ದಾರಿ ಇದೆ. ಹೈಕಮಾಂಡ್ ಜೊತೆ ಮಾತನಾಡಿ ಅವರೇ ಫೈನಲ್ ಮಾಡುತ್ತಾರೆ. ಅದರ ಬಗ್ಗೆ ನನಗೆ ಹೆಚ್ಚಿಗೆ ಮಾಹಿತಿ ಇಲ್ಲ ಎಂದರು.

Share News

About Shaikh BigTv

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *