Breaking News

ಸಂಡೂರು ಉಪಚುನಾವಣೆ: ವಿವಿಧ ರಾಜಕೀಯ ಪಕ್ಷಗಳಿಗೆ ಖಡಕ್ ಸೂಚನೆ ಕೊಟ್ಟ ಜಿಲ್ಲಾಧಿಕಾರಿ

ಬಳ್ಳಾರಿ: ಜಿಲ್ಲೆಯ ಸಂಡೂರು ಕ್ಷೇತ್ರದ ವಿಧಾನಸಭಾ ಉಪ ಚುನಾವಣೆ 2024ರ ಹಿನ್ನಲೆಯಲ್ಲಿ ಜಿಲ್ಲಾ ಚುನಾವಣಾಧಿಕಾರಿ, ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ವಿವಿಧ ರಾಜಕೀಯ ಪಕ್ಷಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಮಾದರಿ ನೀತಿ ಸಂಹಿತೆ ಜಾರಿ, ಚುನಾವಣಾ ಪ್ರಚಾರದ ಕುರಿತು ಪಕ್ಷಗಳಿಗೆ ಮಾಹಿತಿ ನೀಡಿದ್ದಾರೆ.
ನವೆಂಬರ್ 13ರಂದು ಮತದಾನ ನಡೆಯಲಿದ್ದು, ನವೆಂಬರ್ 23ರಂದು ಚುನಾವಣಾ ಫಲಿತಾಂಶ ಘೋಷಣೆಯಾಗಲಿದೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಜಿಲ್ಲಾಧಿಕಾರಿ ಸಭೆ ನಡೆಸಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್, ಸಹಾಯಕ ಆಯುಕ್ತ ಪ್ರಮೋದ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಮತ್ತು ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಪ್ರಶಾಂತ್ ಕುಮಾರ್ ಮಿಶ್ರಾ ಮಾತನಾಡಿ, ಸಂಡೂರು ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆಯಾಗಿದ್ದು, ಈಗಾಗಲೇ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ. ಸಾರ್ವಜನಿಕ ಸಭೆ, ಸಮಾರಂಭ, ರ‍್ಯಾಲಿ ನಡೆಸಲು, ಕಟ್ಟಡ ಬಳಕೆ, ವಾಹನ ಹಾಗೂ ಇನ್ನಿತರೆ ನಿಯಮಗಳಿಗೆ ಸುವಿಧಾ ತಂತ್ರಾಂಶ ಮೂಲಕ ಅನುಮತಿ ಕಡ್ಡಾಯವಾಗಿ ಪಡೆಯಬೇಕು ಎಂದು ಹೇಳಿದರು.

Share News

About BigTv News

Check Also

ಬೆಳಗಾವಿಯಲ್ಲಿ ‘ಕರ್ನಾಟಕ ಬಂದ್’ಗೆ ಅಭೂತಪೂರ್ವ ಬೆಂಬಲ : ಧಾರವಾಡದಲ್ಲಿ ನಿಷೇಧಾಜ್ಞೆ ಜಾರಿ

ಬೆಳಗಾವಿ/ಧಾರವಾಡ: ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಉತ್ತರ ಕರ್ನಾಟಕದಾದ್ಯಂತ ವ್ಯಾಪಕ ಬೆಂಬಲ …

Leave a Reply

Your email address will not be published. Required fields are marked *