Breaking News

ನವಲಗುಂದದಲ್ಲಿ ಶ್ರೀ ಲಕ್ಷ್ಮೀ ದೇವಿಯ ಪ್ರಾಣ ಪ್ರತಿಷ್ಠಾಪನೆ

ನವಲಗುಂದ: ಪಟ್ಟಣದ ಬಸ್ತಿ ಓಣಿಯಲ್ಲಿ ನೂತನವಾಗಿ ನಿರ್ಮಾಣವಾದ ಲಕ್ಷ್ಮೀ ದೇವಸ್ಥಾನಕ್ಕೆ ಇಂದು ಶ್ರೀ ಲಕ್ಷ್ಮೀ ದೇವಿಯ ಪ್ರಾಣ ಪ್ರತಿಷ್ಠಾಪನೆ ಜರುಗಿತು.

ವಾದ್ಯ ಮೇಳದೊಂದಿಗೆ ಶ್ರೀ ಲಕ್ಷ್ಮೀ ದೇವಿಯ ಮೂರ್ತಿ ಮೆರವಣಿಗೆ ಪ್ರಾರಂಭವಾಗಿದ್ದು, ಸುಮಂಗಲೆಯರು ಕುಂಭ ಹೊತ್ತು ಮೆರವಣಿಗೆಗೆ ಮೆರಗು ತಂದರು. ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ದೇವಸ್ಥಾನ ತಲುಪಿದ ಶ್ರೀ ಲಕ್ಷ್ಮೀ ದೇವಿಯ ವಿಗ್ರಹ ಪೂಜಾ ವಿಧಿ ವಿಧಾನ ನೆರವೇರಿದ ಬಳಿಕ ಪ್ರಾಣ ಪ್ರತಿಷ್ಠಾಪನೆ ಮಾಡಲಾಯಿತು.

ಇನ್ನೂ ಇಂದಿನಿಂದ ನಾಲ್ಕು ದಿನಗಳ ಕಾಲ ಜಾತ್ರಾ ಮಹೋತ್ಸವ ಹಮ್ಮಿಕೊಳ್ಳಲಾಗಿದ್ದು, ದೇವಸ್ಥಾನ ಹಾಗೂ ಓಣಿಯ ಜನತೆ ಪ್ರತಿ ದಿನ ಬಂದಂತ ಭಕ್ತರಿಗೆ ಪ್ರಸಾದ ವ್ಯವಸ್ಥೆ ಕಲ್ಪಿಸಿದ್ದಾರೆ.

Share News

About Shaikh BigTv

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *