Breaking News

ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಹಾಸನ ಮಾಜಿ ಸಂಸದ, ಅತ್ಯಾಚಾರ ಆರೋಪಿ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಬಿಗ್ ಶಾಕ್ ಕೊಟ್ಟಿದೆ, ಅತ್ಯಾಚಾರ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಪ್ರಜ್ವಲ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.
ಇನ್ನೂ ಎರಡು ನಿರೀಕ್ಷಣಾ ಜಾಮೀನು ಅರ್ಜಿಗಳನ್ನೂ ಕೋರ್ಟ್ ವಜಾಗೊಳಿಸಿದೆ ಇದೀಗ ಪ್ರಜ್ವಲ್‌ಗೆ ಜೈಲೇ ಗತಿ ಎನ್ನುವಂತಾಗಿದೆ.
ಪ್ರಜ್ವಲ್‌ ರೇವಣ್ಣ ಒಂದು ಪ್ರಕರಣದಲ್ಲಿ ಜಾಮೀನು ಹಾಗೂ ಇನ್ನೆರಡು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದರು. ವಿಚಾರಣೆ ನಡೆಸಿದ್ದ ತೀರ್ಪು ಕಾಯ್ದಿರಿಸಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಇಂದು ಮೂರು ಅರ್ಜಿಗಳನ್ನು ವಜಾಗೊಳಿಸಿದೆ. ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಜಾಮೀನು ಕೋರಿದ್ದರೆ, ಸಿಐಡಿ ಸೈಬರ್ ಸೆಲ್ ನಲ್ಲಿ ದಾಖಲಾಗಿದ್ದ ಇನ್ನೆರಡು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದರು. ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಮೂರು ಅರ್ಜಿಗಳು ವಜಾಗೊಂಡಿವೆ.
ಪ್ರಜ್ವಲ್ ಒಟ್ಟು ನಾಲ್ಕು ಪ್ರಕರಣಗಳಲ್ಲಿ ಮೂರೂ ಪ್ರಕರಣಗಳ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಎರಡು ಅತ್ಯಾಚಾರ, ಒಂದು ಮಹಿಳೆ ಅಶ್ಲೀಲ ದೃಶ್ಯ ಸೆರೆಹಿಡಿದ ಪ್ರಕರಣದ ಜಾಮೀನು ಅರ್ಜಿ ವಜಾಗೊಂಡಿದ್ದು, ಇನ್ನೊಂದು ಅತ್ಯಾಚಾರ ಪ್ರಕರಣದ ಆದೇಶ ಪ್ರಕಟಿಸುವುದು ಬಾಕಿಯಿದೆ.
ಪ್ರಜ್ವಲ್‌ ವಿರುದ್ಧ ಮೂರು ಅತ್ಯಾಚಾರ ಮತ್ತು ಒಂದು ಲೈಂಗಿಕ ದೌರ್ಜನ್ಯ, ಮಹಿಳೆಯ ಘನತೆಗೆ ಧಕ್ಕೆ ಉಂಟು ಮಾಡಿದ ಆರೋಪದ ಸಂಬಂಧ ಪ್ರತ್ಯೇಕವಾಗಿ ನಾಲ್ಕು ಎಫ್‌ಐಆರ್‌ಗಳು ದಾಖಲಾಗಿವೆ. ಈ ಪೈಕಿ ಮೂರು ಪ್ರಕರಣಗಳಲ್ಲಿ ಪ್ರಜ್ವಲ್‌ ಜಾಮೀನು ಕೋರಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಇಂದು ವಜಾ ಮಾಡಿದೆ.
ಹೊಳೆನರಸೀಪುರ ಟೌನ್‌ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ಜಾಮೀನು ಅರ್ಜಿ ಸಲ್ಲಿಸಿದ್ದರು. ಇದರ ಜೊತೆಗೆ ಸಿಐಡಿ ಸೈಬರ್‌ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ & ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎರಡು ಪ್ರತ್ಯೇಕ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಎರಡು ನಿರೀಕ್ಷಣಾ ಜಾಮೀನು ಅರ್ಜಿಗಳನ್ನ ವಜಾ ಮಾಡಿ ನ್ಯಾ. ನಾಗಪ್ರಸನ್ನ ಅವರಿದ್ದ ಪೀಠದಿಂದ ಮಹತ್ವದ ಆದೇಶ ಹೊರಡಿಸಿದ್ದಾರೆ ಇನ್ನು ಪ್ರಜ್ವಲ್ ರೇವಣ್ಣಗೆ ಜೈಲೇ ಗತಿಯಾಗಲಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *