ಹುಬ್ಬಳ್ಳಿ: ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ ಅವರು ಇಂದು ತಮ್ಮ ಸದಸ್ಯ ಸ್ಥಾನಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ ರಾಜೀನಾಮೆ ನೀಡಿದರು.
ಹುಬ್ಬಳ್ಳಿಯ ಪಿಂಟೋ ರಸ್ತೆಯಲ್ಲಿರುವ ಸಭಾಪತಿ ಬಸವರಾಜ ಹೊರಟ್ಟಿ ಅವರ ನಿವಾಸಕ್ಕೆ ಭೇಟಿ ನೀಡಿ ತಮ್ಮ ಸದಸ್ಯ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದರು.
ರಾಜೀನಾಮೆ ಪತ್ರ ಸ್ವೀಕರಿಸಿ ಬಳಿಕ ಮಾತನಾಡಿದ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿ, ಸಿ.ಪಿ.ಯೋಗೇಶ್ವರ ಅವರು ರಾಜೀನಾಮೆ ಕೊಟ್ಟಿದ್ದಾರೆ. ಸ್ವ ಇಚ್ಚೆಯಿಂದ ಕೊಟ್ಟಿದ್ದಾರೆ. ಅದನ್ನು ಅಂಗೀಕಾರ ಮಾಡಿದ್ದೇನೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ಅವರು ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

