Breaking News

ರೈತರು ಬೆಳೆ ಹಾನಿ : ಪ್ರತಿ ಎಕರೆಗೆ 20 ಸಾವಿರ ರೂ. ಪರಿಹಾರ ಘೋಷಣೆ ಮಾಡುವಂತೆ ಪ್ರತಿಭಟನೆ

ಧಾರವಾಡ: ಕಳೆದ ಕೆಲ ತಿಂಗಳಿನಿಂದ ಅತಿಯಾದ ಮಳೆಯಾಗಿ ರೈತರು ಬೆಳೆದ ಬೆಳೆ ಹಾಳಾಗಿವೆ. ರಾಜ್ಯ ಸರ್ಕಾರ ಕೂಡಲೇ ಪ್ರತಿ ಎಕರೆಗೆ 20 ಸಾವಿರ ರೂಪಾಯಿ ಪರಿಹಾರ ಘೋಷಣೆ ಮಾಡಬೇಕು ಎಂದು ಆಗ್ರಹಿಸಿ ಭಾರತೀಯ ಕಿಸಾನ್ ಸಂಘ-ಕರ್ನಾಟಕ ಪ್ರದೇಶ ಸಂಘಟನೆಯ ನೇತೃತ್ವದಲ್ಲಿ ರೈತರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಧಾರವಾಡ ಜಿಲ್ಲೆಯ ಅಂದಾಜು 40 ಸಾವಿರ ಹೆಕ್ಟೇ‌ರ್ ಪ್ರದೇಶದಲ್ಲಿದ್ದ ಬೆಳೆ ಮಳೆಯಿಂದಾಗಿ ಹಾನಿಗೀಡಾಗಿದೆ. ಇದರಿಂದಾಗಿ ರೈತರು ಆತ್ಮಹತ್ಯೆಯ ದಾರಿ ತುಳಿದಿದ್ದಾರೆ. ರಾಜ್ಯ ಸರ್ಕಾರದಿಂದ ಇದುವರೆಗೂ ಕಟ್ಟಿದ ಬೆಳೆ ವಿಮೆ ಸಹ ಬಂದಿಲ್ಲ. ಕೃಷಿ ಇಲಾಖೆಯವರನ್ನು ಕೇಳಿದರೆ ಇದರ ಬಗ್ಗೆ ಮಾಹಿತಿ ಇಲ್ಲ ಎಂದು ಹೇಳುತ್ತಿದ್ದಾರೆ ಎಂದು ರೈತರು ಆರೋಪಿಸಿದರು.

Share News

About Shaikh BigTv

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *