Breaking News

545 ಪಿಎಸ್ಐ ಹುದ್ದೆಗಳ ನೇಮಕಾತಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ 545 ಪಿಎಸ್‌ಐ ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟವಾಗಿದೆ, 545 ಪಿಎಸ್‌ಐ ಹುದ್ದೆಗಳಿಗೆ ಮರುಪರೀಕ್ಷೆ ನಡೆಸಲಾಗಿತ್ತು. ಇದರಲ್ಲಿ 545 ಪಿಎಸ್‌ಐ ಹುದ್ದೆಗಳ ತಾತ್ಕಾಲಿಕ ನೇಮಕಾತಿ ಪಟ್ಟಿಯನ್ನು ಸರ್ಕಾರ ಇಂದು ಬಿಡುಗಡೆ ಮಾಡಿದೆ.
ದಿನಾಂಕ: 06.06.2020 ರ ಸುತ್ತೋಲೆ ಅನ್ವಯ ಆಯ್ಕೆ ಪಟ್ಟಿಯಿಂದ ಹೊರಗುಳಿಯುವ 40 ಕಲ್ಯಾಣ ಕರ್ನಾಟಕ ವೃಂದದ ಅಭ್ಯರ್ಥಿಗಳಿಗನುಗುಣವಾಗಿ 40 ಹುದ್ದೆಗಳನ್ನು ಕಲ್ಯಾಣ ಕರ್ನಾಟಕ ವೃಂದದಲ್ಲಿ ಕಾಯ್ದಿರಿಸಿ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಆಯ್ಕೆ ಪಟ್ಟಿಯನ್ನು ಪ್ರಕಟಿಸುವ ಸಂದರ್ಭದಲ್ಲಿ ಈ ಆಯ್ಕೆ ಪಟ್ಟಿಯು ಮಾನ್ಯ ಉಚ್ಚ ನ್ಯಾಯಾಲಯವು ಪಿಟಿಷನ್ 20:16343/202400 ನೀಡುವ ತೀರ್ಪಿಗೊಳಪಟ್ಟಿರುತ್ತದೆಂದು ಹಾಗೂ ಈ ಆಯ್ಕೆ ಪಟ್ಟಿಯಲ್ಲಿ ವೃಂದ ಬದಲಾವಣೆ, ಮೀಸಲಾತಿ ಪ್ರವರ್ಗ ಬದಲಾವಣೆ, ಅರ್ಹತಾ ಪಟ್ಟಿಯಲ್ಲಿನ ಸ್ಥಾನ ಮತ್ತು ಘಟಕಗಳ ಬದಲಾವಣೆ ಆಗುವ ಸಾಧ್ಯತೆಗೊಳಪಟ್ಟಿರುತ್ತದೆ ಎಂಬ ಷರತ್ತುಗಳನ್ನು ವಿಧಿಸಲಾಗಿದೆ.

Share News

About BigTv News

Check Also

6ನೇ ತರಗತಿ ಮೇಲೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ

ಮುಂಡಗೋಡ: ಆರನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯನ್ನಾಗಿಸಿದ ಆರೋಪದ ಮೇಲೆ 65 ವರ್ಷದ ಇಸ್ಮಾಯಿಲ್ ಹುಲಗೂರ …

Leave a Reply

Your email address will not be published. Required fields are marked *