Breaking News

ಬೆಂಗಳೂರಿನಲ್ಲಿ ಭಾರೀ ಮಳೆ: ನೆರೆ ಪರಿಹಾರಕ್ಕೆ 1 ಸಾವಿರ ಕೋಟಿ ಬಿಡುಗಡೆಗೊಳಿಸಲು ಆರ್.ಅಶೋಕ್ ಆಗ್ರಹ

ಬೊಮ್ಮನಹಳ್ಳಿ: ಬೆಂಗಳೂರು ನಗರದಲ್ಲಿ ಒಂದು ವಾರದಿಂದ ಧಾರಾಕಾರ ಮಳೆಯಾಗುತ್ತಿದ್ದು, ಅನೇಕ ಪ್ರದೇಶಗಳು ನೆರೆಯಿಂದ ತತ್ತರಿಸಿವೆ ನೆರೆ ಪರಿಹಾರಕ್ಕಾಗಿ ರಾಜ್ಯ ಸರ್ಕಾರ ₹1 ಸಾವಿರ ಕೋಟಿ ಬಿಡುಗಡೆ ಮಾಡಬೇಕು ಎಂದು ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ಆಗ್ರಹಿಸಿದರು.
ನಗರದ ಸಿಲ್ಕ್ ಬೋರ್ಡ್ ಜಂಕ್ಷನ್ ಮತ್ತು ಎಚ್.ಎಸ್. ಆರ್ ಬಡಾವಣೆಯಲ್ಲಿನ ಮಳೆ ಹಾನಿಗೊಳಗಾದ ಪ್ರದೇಶಗಳಿಗೆ ಇಂದು ಭೇಟಿ ನೀಡಿದ ನಂತರ ಅವರು ಮಾತನಾಡಿದರು.
ಸಿಲ್ಕ್ ಬೋರ್ಡ್ ಜಂಕ್ಷನ್‍ನಲ್ಲಿ ಪದೇಪದೇ ನೆರೆಯಿಂದ ಸಮಸ್ಯೆ ಉಂಟಾಗುತ್ತಿದೆ. ಇಲ್ಲಿ ನೆರೆ ತಪ್ಪಿಸಲು ಆರು ತಿಂಗಳ ಹಿಂದೆಯೇ ₹3 ಕೋಟಿ ವೆಚ್ಚದ ಟೆಂಡರ್‌ ಆಗಿದ್ದರೂ, ಇನ್ನೂ ಕೆಲಸ ಶುರು ಮಾಡಿಲ್ಲ ಅಧಿಕಾರಿಗಳ ಮೇಲೆ ಸರ್ಕಾರಕ್ಕೆ ಯಾವುದೇ ಹಿಡಿತವಿಲ್ಲ ಎಂಬುದನ್ನು ತೋರುತ್ತದೆ ಎಂದು ಆರೋಪಿಸಿದರು.
ರಾಜಕಾಲುವೆಗಳಲ್ಲಿ ಕಸ ತುಂಬಿ ದುರ್ವಾಸನೆ ಬೀರುತ್ತಿದೆ ಹಿಂದೆ ನಾವು ರಾಜಕಾಲುವೆಗಳಲ್ಲಿದ್ದ ಕಸಕಡ್ಡಿ ವಿಲೇವಾರಿ, ತ್ಯಾಜ್ಯಗಳ ತೆರವಿನ ಕಡೆ ಗಮನ ಕೊಡುತ್ತಿದ್ದೆವು. ರಾಜ್ಯ ಸರ್ಕಾರ, ಒಂದೂವರೆ ವರ್ಷದಿಂದ ನಗರದ ರಾಜಕಾಲುವೆ, ಒಳ ಚರಂಡಿಗಳನ್ನು ಸ್ವಚ್ಛಗೊಳಿಸಿಲ್ಲ. ಸರ್ಕಾರದ ಖಜಾನೆ ಖಾಲಿಯಾಗಿದೆ ಮುಖ್ಯಮಂತ್ರಿಯವರು 15 ದಿನಗಳಿಗೊಮ್ಮೆ ಬೆಂಗಳೂರು ರೌಂಡ್ಸ್‌ ಮಾಡುವುದಾಗಿ ಹೇಳಿದ್ದರು. ಆದರೆ ಮಳೆಯಿಂದ ಬೆಂಗಳೂರು ಮುಳುಗಡೆಯಾದರೂ ಮುಖ್ಯಮಂತ್ರಿಗಳು ಇನ್ನೂ ಹೊರ ಬಂದಿಲ್ಲ ಎಂದು ವ್ಯಂಗ್ಯವಾಡಿದರು.
ರಾಜ್ಯಾದ್ಯಂತ ಮಳೆಯಿಂದಾಗಿ ಅಪಾರ ಪ್ರಮಾಣದಲ್ಲಿ ಬೆಳೆ ನಷ್ಟ ಉಂಟಾಗಿದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದರೂ ರಾಜ್ಯ ಸರ್ಕಾರ, ಜನರ ನೆರವಿಗೆ ಬಂದಿಲ್ಲ. ಸರ್ಕಾರ ಅತಿವೃಷ್ಟಿ ಪರಿಹಾರಕ್ಕಾಗಿ ₹5 ಸಾವಿರ ಕೋಟಿ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ಸಿಲ್ಕ್‌ ಬೋರ್ಡ್‌ನಲ್ಲಿ ಮೆಟ್ರೊ ರೈಲು ಮಾರ್ಗಕ್ಕೆ ಸಂಬಂಧಿಸಿದ ಕಾಮಗಾರಿ ನಡೆಯುತ್ತಿರುವ ಕಾರಣಕ್ಕಾಗಿ ಒಂದು ಭಾಗದ ಒಳಚರಂಡಿಯನ್ನು ಮುಚ್ಚಲಾಗಿದೆ. ಎಲ್ಲ ಕಡೆ ಮಳೆ ಆಗುತ್ತಿರುವುದರಿಂದ ಕೆರೆಗಳು ತುಂಬಿ ಹರಿಯುತ್ತಿರುವುದರಿಂದ ರಾಜಕಾಲುವೆಗಳ ಮೂಲಕ ಹರಿದು ಬರುವ ನೀರು ಸಿಲ್ಕ್‌ ಬೋರ್ಡ್‌ ಜಂಕ್ಷನ್‌ಲ್ಲಿ ಶೇಖರಣೆಗೊಂಡು ರಸ್ತೆಗೆ ಹರಿದು ಬರುತ್ತಿದೆ. ಇದರಿಂದಾಗಿ ಇಲ್ಲಿ ನೆರೆ ಉಂಟಾಗುತ್ತಿದೆ ಇದರಿಂದ ಹೊಸೂರು ರಸ್ತೆಯಲ್ಲಿ ಸಂಚಾರ ದಟ್ಟಣೆ ಹೆಚ್ಚುತ್ತಿದೆ ಎನ್ನಲಾಗಿದೆ.
ಈ ಸಂದರ್ಭದಲ್ಲಿ ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಶಾಸಕ ಸತೀಶ್‌ರೆಡ್ಡಿ, ಬಿಬಿಎಂಪಿ ಬೊಮ್ಮನಹಳ್ಳಿ ವಲಯ ಜಂಟಿ ಆಯುಕ್ತ ಅಜಿತ್‌, ಮುಖ್ಯ ಎಂಜಿನಿಯರ್‌ ಶಶಿಕುಮಾರ್‌ ಇದ್ದರು.

Share News

About BigTv News

Check Also

ಬೆಳಗಾವಿಯಲ್ಲಿ ‘ಕರ್ನಾಟಕ ಬಂದ್’ಗೆ ಅಭೂತಪೂರ್ವ ಬೆಂಬಲ : ಧಾರವಾಡದಲ್ಲಿ ನಿಷೇಧಾಜ್ಞೆ ಜಾರಿ

ಬೆಳಗಾವಿ/ಧಾರವಾಡ: ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಉತ್ತರ ಕರ್ನಾಟಕದಾದ್ಯಂತ ವ್ಯಾಪಕ ಬೆಂಬಲ …

Leave a Reply

Your email address will not be published. Required fields are marked *