Breaking News

ತುಂಗಭದ್ರಾ ನದಿಗೆ ಬಿದ್ದು ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ

ಗದಗ: ವಿಜಯನಗರ ಜಿಲ್ಲೆ ಹೂವಿನ ಹಡಗಲಿ ವ್ಯಾಪ್ತಿಯ ತುಂಗಭದ್ರಾ ನದಿಗೆ ಬಿದ್ದು ನಾಪತ್ತೆಯಾಗಿದ್ದ ಯುವಕ ದಿನೇಶ್ ಮೃತದೇಹ‌ ಇಂದು ತೀರದಲ್ಲಿ ಪತ್ತೆಯಾಗಿದೆ.
ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಮ್ಮಿಗಿ ಬ್ಯಾರೇಜ್ ಮೇಲಿಂದ ತುಂಗಭದ್ರಾ ನದಿಗೆ ಹಾರಿ ದಿನೇಶ್ ಆತ್ಮಹತ್ಯೆಗೆ ಯತ್ನಿಸಿದ್ದ ಎಂದು ವರದಿ ತಿಳಿಸಿದೆ.
ಮುಂಡರಗಿ ತಾಲೂಕು ಮುರಡಿ ತಾಂಡಾದ ಯುವಕ ದಿನೇಶ ಸಾಲದ ಸುಳಿಗೆ ಸಿಲುಕಿದ್ದು, ಇದರಿಂದಾಗಿ ಅಕ್ಟೋಬರ್ 20 (ಭಾನುವಾರ)ದಂದು ನದಿಗೆ ಹಾರಿದ್ದ.
ನೀರಿನ ಸೆಳೆತ ಹೆಚ್ಚಾಗಿದ್ದರಿಂದ ದಿನೇಶ್‌ ಕೊಚ್ಚಿಕೊಂಡು ಹೋಗಿದ್ದ ಎರಡು ದಿನಗಳಿಂದ ಆತನ ಶವಕ್ಕಾಗಿ ಶೋಧ ನಡೆಸಲಾಗುತ್ತಿತ್ತು ಇಂದು ಬೆಳಗ್ಗೆ ಮೃತದೇಹ ಪತ್ತೆಯಾಗಿದೆ.
ಸ್ಥಳಕ್ಕೆ ಮುಂಡರಗಿ ತಹಶಿಲ್ದಾರ ಯರಿಸ್ವಾಮಿ ಭೇಟಿ ನೀಡಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸುವುದಾಗಿ ತಿಳಿಸಿದ್ದಾರೆ.

Share News

About bigtvnews22

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *