ಹುಬ್ಬಳ್ಳಿ: ಅವಳಿ ನಗರದಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಖತರ್ನಾಕ ಕಳ್ಳನನ್ನು ಬಂಧಿಸುವಲ್ಲಿ ಹುಬ್ಬಳ್ಳಿಯ ಉಪನಗರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.
ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಬೈಕ್ ಕಳ್ಳತನ ಪ್ರಕರಣವನ್ನು ಬೆನ್ನತ್ತಿದ್ದ ಎಸಿಪಿ ಶಿವಪ್ರಕಾಶ ಮಾರ್ಗದರ್ಶನದಲ್ಲಿ ಇನ್ಸೆಕ್ಟರ್ ಹೂಗಾರ ನೇತೃತ್ವದ ತಂಡ ಹುಬ್ಬಳ್ಳಿ ಮೂಲದ ಮಹಾಂತೇಶ ಎಂಬಾತನನ್ನು ಬಂಧಿಸಿದ್ದಾರೆ.
ಮಹಾಂತೇಶ ಕಲಾಲ ಈತ ಆನಂದ ನಗರದ ನಿವಾಸಿಯಾಗಿದ್ದು, ಈತ ಬೈಕ್ ಕಳ್ಳತನ ಮಾಡಿ ಮಾರಾಟ ಮಾಡುತ್ತಿದ್ದ ಸದ್ಯ ಬಂಧಿತ ಆರೋಪಿಯಿಂದ 12 ಬೈಕ್ ಹಾಗೂ 1,10,000 ರೂಪಾಯಿ ನಗದು ವಶಕ್ಕೆ ಪಡೆದು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಖತರ್ನಾಕ ಬೈಕ್ ಕಳ್ಳನನ್ನು ಬಂಧಿಸಿದ ಉಪನಗರ ಪೊಲೀಸರ ಕಾರ್ಯಕ್ಕೆ ಕಮಿಷನರ್ ಎನ್ ಶಶಿಕುಮಾರ್ ಹಾಗೂ ಅಪರಾಧ ವಿಭಾಗದ ಡಿಸಿಪಿ ರವೀಶ್ ಉಪನಗರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

