Breaking News

ಸಂಡೂರು ಉಪಚುನಾವಣೆಗೆ ತುಕಾರಾಂ ಪತ್ನಿ ಅನ್ನಪೂರ್ಣ ರಿಗೆ ಟಿಕೆಟ್ ಘೋಷಿಸಿದ ಕಾಂಗ್ರೆಸ್

ಮೈಸೂರು: ರಾಜ್ಯದಲ್ಲಿ ಉಪಚುನಾವಣೆಯ ಕಾವು ದಿನದಿಂದ ದಿನಕ್ಕೆ ಜೋರಾಗುತ್ತಿದೆ ಒಟ್ಟು ಮೂರು ಕ್ಷೇತ್ರಗಳಿಗೆ ಈ ಉಪಚುನಾವಣೆ ನಡೆಯುತ್ತಿದ್ದು, ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳು ಈಗಾಗಲೇ ಎರಡು ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿವೆ.
ಆದರೆ ಈವರೆಗೂ ಕಾಂಗ್ರೆಸ್ ಯಾವುದೇ ಕ್ಷೇತ್ರಕ್ಕೂ ಟಿಕೆಟ್ ಘೋಷಣೆ ಮಾಡಿಲ್ಲ. ಇದೀಗ ಸಿಎಂ ಸಿದ್ದರಾಮಯ್ಯ ಅವರು ಸಂಡೂರಿನಲ್ಲಿ ತುಕಾರಾಂ ಕುಟುಂಬಕ್ಕೆ ಟಿಕೆಟ್ ಫೈನಲ್ ಮಾಡಿದ್ದೇವೆ ಎಂದು ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಸಂಡೂರಿನಲ್ಲಿ ಸಂಸದ ತುಕಾರಾಂ ಕುಟುಂಬಕ್ಕೆ ಟಿಕೆಟ್ ಫೈನಲ್ ಮಾಡಿದ್ದೇವೆ, ಅವರ ಪತ್ನಿ ಅನ್ನಪೂರ್ಣ ಅವರಿಗೆ ಟಿಕೆಟ್ ನೀಡುತ್ತೇನೆ ಇನ್ನು ಚನ್ನಪಟ್ಟಣ ಶಿಗ್ಗಾವಿ ಬಗ್ಗೆ ಇನ್ನೂ ತೀರ್ಮಾನ ಮಾಡಿಲ್ಲ. ಆ ಬಗ್ಗೆ ಶೀಘ್ರದಲ್ಲೇ ತೀರ್ಮಾನ ಮಾಡುತ್ತೇವೆ ಎಂದು ಹೇಳಿದ್ದಾರೆ.

Share News

About BigTv News

Check Also

ಚಿಕ್ಕಬಳ್ಳಾಪುರ : ಮಾತನಾಡೋಕೆ ಅಂತ ಬಂದು ಹಿರಿಯ ವಕೀಲನ ಕತ್ತು ಸೀಳಿ ಕೊಲೆಗೆ ಯತ್ನ : ಆರೋಪಿ ಎಸ್ಕೇಪ್!

ಚಿಕ್ಕಬಳ್ಳಾಪುರ: ಗೌರಿಬಿದನೂರಿನಲ್ಲಿ ಹಿರಿಯ ವಕೀಲ ಹಾಗೂ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸಣ್ಣಕಿ ವೆಂಕಟರಮಣಪ್ಪ ಅವರ ಕತ್ತು ಕೊಯ್ದು ಕೊಲೆಗೆ …

Leave a Reply

Your email address will not be published. Required fields are marked *