Breaking News

ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿಗೊಳಿಸಬೇಕೆಂದು ಒತ್ತಾಯಿಸಿ ಛಲವಾದಿ ಸಮುದಾಯ ವಕೀಲರಿಂದ ಪ್ರತಿಭಟನೆ

ದಾವಣಗೆರೆ: ಸರ್ವೋಚ್ಛ ನ್ಯಾಯಾಲಯದ ತೀರ್ಪಿನ ಆದೇಶದಂತೆ ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿಗೊಳಿಸಬೇಕೆಂದು ಒತ್ತಾಯಿಸಿ ಮಾದಿಗ ಮತ್ತು ಛಲವಾದಿ ವಕೀಲರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಒಳಮೀಸಲಾತಿಗೆ ಸುಪ್ರೀಂ ಅಸ್ತು ಎಂದಿದೆ ಆದರೆ, ಆದೇಶ ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದೆ. ಅಹಿಂದ ಹೆಸರು ಹೇಳಿಕೊಂಡು ಬಂದಿರುವ ಸರ್ಕಾರ ದಲಿತರಿಗೆ ಒಳಿತು ಮಾಡುವಲ್ಲಿ ಹಿಂದೇಟು ಹಾಕುತ್ತಿದೆ ಎಂದು ಆರೋಪಿಸಿದರು.
ಒಳಮೀಸಲಾತಿ ಜಾರಿಗೊಳಿಸುವಂತೆ ಒತ್ತಾಯಿಸಿ ಕಳೆದ ಮೂರು ದಶಕಗಳಿಂದ ನಡೆಸಿದ ನಿರಂತರ ಹೋರಾಟದ ಫಲವಾಗಿ ಈಗ ಒಳಮೀಸಲಾತಿ ದೊರಕುವ ಸಮಯ ಬಂದಿದೆ. ಸರ್ವೋಚ್ಚ ನ್ಯಾಯಾಲಯ ಅ.1 ರಂದು ಒಳ ಮೀಸಲಾತಿ ಕಲ್ಪಿಸುವ ಅಧಿಕಾರ ಮತ್ತು ಹೊಣೆಗಾರಿಕೆ ಆಯಾ ರಾಜ್ಯ ಸರ್ಕಾರಳಿಗಿದೆ ಎಂಬುದನ್ನು ಸ್ಪಷ್ಟವಾಗಿ ತಿಳಿಸಿದೆ. ಅದರ ಅನ್ವಯ ರಾಜ್ಯ ಸರ್ಕಾರ ಕೂಡಲೇ ಒಳ ಮೀಸಲಾತಿ ಸೌಲಭ್ಯ ಒದಗಿಸಬೇಕೆಂದು ವಕೀಲರು ಒತ್ತಾಯಿಸಿದರು.
ಸುಪ್ರೀಂ ಕೋರ್ಟ್ನ ಸಾಂವಿಧಾನಿಕ ಪೀಠ ನೀಡಿರುವ ತೀರ್ಪುನಂತೆ ಕೂಡಲೇ ಒಳಮೀಸಲಾತಿ ಜಾರಿ ಮಾಡಬೇಕು ಅಲ್ಲಿಯವರೆಗೆ ರಾಜ್ಯದಲ್ಲಿ ನಡೆಯುವ ಎಲ್ಲ ಸರ್ಕಾರಿ ಮತ್ತು ಅರೆ ಸರ್ಕಾರಿ ನೇಮಕಾತಿ ಸ್ಥಗಿತಗೊಳಿಸಬೇಕು ಹಣಕಾಸಿನ ಮತ್ತು ಇತರೆ ಸೌಲಭ್ಯ ನಿಲ್ಲಿಸಬೇಕು ಎಂದು ಆಗ್ರಹಿಸಿದರು.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *