Breaking News

ಸಂಡೂರು ಉಪಚುನಾವಣೆಗೆ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಎನ್.ವೆಂಕಣ್ಣ ನಾಮಪತ್ರ ಸಲ್ಲಿಕೆ

ಸಂಡೂರು: ಉಪಚುನಾವಣೆಯಲ್ಲಿ ಸಂಡೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಬಂಡಾಯ ಅಭ್ಯರ್ಥಿಯಾಗಿ ಎನ್.ವೆಂಕಣ್ಣ ನಾಮಪತ್ರ ಸಲ್ಲಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಅವರು 2008ರಿಂದಲೂ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿದ್ದೇನೆ ಇ.ತುಕರಾಂ ಅವರ ಪ್ರತಿ ಚುನಾವಣೆಯಲ್ಲೂ ಬೆಂಬಲಿಸಿ ಕೆಲಸ ಮಾಡಿದ್ದೇನೆ.
ಎಸ್ಟಿ ಮೀಸಲು ಕ್ಷೇತ್ರವಾದ್ದರಿಂದ ಇದೀಗ ನಮಗೂ ಒಂದು ಅವಕಾಶ ಕೊಡಿ ಎಂದು ಎಐಸಿಸಿ, ಕೆಪಿಸಿಸಿ ವೀಕ್ಷಕರಿಗೆ ಮನವಿ ಸಲ್ಲಿಸಿದ್ದರೂ ವರಿಷ್ಠರಾಗಲೀ, ಸಂಸದ ತುಕರಾಂ ಅಥವಾ ಕಾರ್ಮಿಕ ಸಚಿವ ಸಂತೋಷ್ ಲಾಡ್ ಈವರೆಗೆ ಯಾವುದೇ ಸ್ಪಂದನೆ ನೀಡಿಲ್ಲ. ಅಲ್ಲದೆ ತುಕಾರಾಂ‌ ಕುಟುಂಬಕ್ಕೆ ಟಿಕೆಟ್ ನೀಡಲು ನಿರ್ಧರಿಸಿರುವುದರಿಂದ ಪಕ್ಷೇತರನಾಗಿ ನಾಮಪತ್ರ ಸಲ್ಲಿಸಿದ್ದೇನೆ ಎಂದರು.
ಕಾಂಗ್ರೆಸ್ ಪಕ್ಷದಲ್ಲಿ ಈಗಾಗಲೇ ಬಂಡಾಯದ ಬಿಸಿ ಇದ್ದು ಬಹುತೇಕ ಮುಖಂಡರು ಕುಟುಂಬ ರಾಜಕಾರಣಕ್ಕೆ ಬೇಸತ್ತಿದ್ದಾರೆ. ಅವರೆಲ್ಲರೂ ನಮ್ಮ ಜೊತೆ ಸಂಪರ್ಕದಲ್ಲಿದ್ದು ಜನ ನಮಗೆ ಆಶೀರ್ವದಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

Share News

About BigTv News

Check Also

ಹಂಪಿ ಎಕ್ಸ್‌ಪ್ರೆಸ್ ರೈಲಿಗೆ ಆಕಸ್ಮಿಕ ಬೆಂಕಿ

ಬಳ್ಳಾರಿ : ಹಂಪಿ ಎಕ್ಸ್‌ಪ್ರೆಸ್ ರೈಲಿನ ಬೋಗಿಯೊಂದರಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಟು ಆತಂಕ ಸೃಷ್ಟಿಯಾದರೂ, ಅನಾಹುತ ಸಂಭವಿಸದೇ ಪ್ರಯಾಣಿಕರು ಪಾರಾದ …

Leave a Reply

Your email address will not be published. Required fields are marked *