ನವದೆಹಲಿ: ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಿದೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧಿಸಲಿದ್ದು, ಬುಧವಾರ (ಅಕ್ಟೋಬರ್ 23) ನಾಮಪತ್ರ ಸಲ್ಲಿಸಲಿದ್ದಾರೆ.
ಈ ವೇಳೆ ಕಾಂಗ್ರೆಸ್ ಮುಖಂಡವಾದ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಮತ್ತಿತರರು ಭಾಗವಹಿಸಲಿದ್ದಾರೆ.
ನಾಮಪತ್ರ ಸಲ್ಲಿಕೆಯ ಹಿನ್ನೆಲೆಯಲ್ಲಿ ಪ್ರಿಯಾಂಕಾ ಗಾಂಧಿ ಅವರು ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಬುಧವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಕಲ್ಪೆಟ್ಟ ಬಸ್ ನಿಲ್ದಾಣದಿಂದ ರೋಡ್ ಶೋ ಆರಂಭಿಸಲಿದ್ದಾರೆ. ಬಳಿಕ 12 ಗಂಟೆ ಸುಮಾರಿಗೆ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಸಲಿದ್ದಾರೆ. ವಿವಿಧ ರಾಜ್ಯಗಳ ಕಾಂಗ್ರೆಸ್ ಮುಖ್ಯಮಂತ್ರಿಗಳು, ರಾಜ್ಯ ಮತ್ತು ದೇಶದ ಉನ್ನತ ಮಟ್ಟದ ನಾಯಕರು ರೋಡ್ ಶೋ ವೇಳೆ ಉಪಸ್ಥಿತರಿರುತ್ತಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

