Breaking News

ಕರ್ನಾಟಕ ರೈತ ಸುರಕ್ಷಾ ಪಿಎಂ ಫಸಲ್ ಭೀಮಾ ಯೋಜನೆ ಅನುಷ್ಠಾನಕ್ಕೆ ಕ್ರಮ ವಹಿಸಲು ಜಿಲ್ಲಾಧಿಕಾರಿ ಸೂಚನೆ

ಕೊಪ್ಪಳ: ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಕ್ರಮ ವಹಿಸುವಂತೆ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
2024-25ನೇ ಸಾಲಿನ ಹಿಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರಾಕೃತಿಕ ದುರಂತ ಮತ್ತು ಹವಾಮಾನ ವೈಪರಿತ್ಯಗಳಿಂದ ರೈತರು ಬೆಳೆದ ಬೆಳೆಗಳಿಗೆ ಅಪಾಯ ಉಂಟಾದಾಗ ರೈತರನ್ನು ರಕ್ಷಿಸಿಸುವ ಮಾಧ್ಯಮವೇ ಬೆಳೆ ವಿಮೆಯಾಗಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ಪ್ರಾರಂಭಿಸಲಾದ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲು ಭೀಮಾ ಯೋಜನೆ ಜಾರಿಗೆ ತರಲಾಯಿತು.
ಯೋಜನೆಯಡಿ ಮೊಬೈಲ್ ಆಧಾರಿತ ತಂತ್ರಜ್ಞಾನ ಬಳಸಿಕೊಂಡು ಬೆಳೆ ಕಟಾವು ಪ್ರಯೋಗಗಳ ಮೂಲಕ ವಾಸ್ತವಿಕ ಇಳುವರಿಯನ್ನು ಕಂಡು ಹಿಡಿಯಲಾಗುತ್ತಿದ್ದು, ಬೆಳೆ ಕಟಾವಿನ ನಂತರದಲ್ಲಿ ಸಂಭವಿಸುವ ಬೆಳೆ ನಷ್ಟಕ್ಕೆ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು. ಈ ಯೋಜನೆಯಲ್ಲಿ ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಿಂದ ಅಧಿಸೂಚಿತ ಘಟಕದಲ್ಲಿ ಶೇಕಡಾ 75ಕ್ಕಿಂತ ಹೆಚ್ಚಿನ ಕ್ಷೇತ್ರದಲ್ಲಿ ಬಿತ್ತನೆ ವಿಫಲಗೊಂಡಲ್ಲಿ ವಿಮಾ ಮೊತ್ತದ ಗರಿಷ್ಟ ಶೇಕಡಾ 25 ರಷ್ಟು ಪರಿಹಾರವನ್ನು ವಿಮಾ ಸಂಸ್ಥೆಯು ವಿಮೆ ಮಾಡಿಸಿದ ರೈತರಿಗೆ ಒದಗಿಸಬೇಕು ಎಂದರು.
ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿರುವ ಅಯಾ ಇಲಾಖೆ ಮತ್ತು ಸಂಸ್ಥೆಗಳ ಪಾತ್ರ ಪ್ರಮುಖವಾಗಿದ್ದು, ಅಧಿಸೂಚಿತ ಬೆಳೆಗಳು ಮತ್ತು ಘಟಕಗಳ ಬಗ್ಗೆ ಬ್ಯಾಂಕುಗಳು, ರೈತ ಸಂಪರ್ಕ ಕೇಂದ್ರಗಳ ಮತ್ತು ಗ್ರಾಮ ಪಂಚಾಯಿತಿ ಕಛೇರಿಗಳ ಸೂಚನಾ ಫಲಕಗಳ ಮೇಲೆ ಪ್ರಕಟಿಸಿ ಯೋಜನೆಯ ಕುರಿತು ವ್ಯಾಪಕ ಪ್ರಚಾರ ಕೈಗೊಳ್ಳಬೇಕು.
ಇದರ ಜೊತೆಗೆ ಪ್ರಚಾರ ಕಾರ್ಯ ಕೈಗೊಂಡು ರೈತರಿಗೆ ತಿಳುವಳಿಕೆ ನೀಡಬೇಕು. ಯೋಜನೆಯ ಬಗ್ಗೆ ಕೃಷಿ ಅಭಿಯಾನ ಕಾರ್ಯಕ್ರಮದಲ್ಲಿ, ಗ್ರಾಮಸಭಾ ಸಭೆಗಳಲ್ಲಿ ಹಾಗೂ ಜನಸ್ಪಂದನ ಸಭೆಗಳಲ್ಲಿಯೂ ಮಾಹಿತಿ ನೀಡಬೇಕು. ಇಲಾಖೆಯ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಮತ್ತು ಜಂಟಿ ಕೃಷಿ ನಿರ್ದೇಶಕರ ಕಚೇರಿಗಳಿಗೆ ಭೇಟಿ ನೀಡುವ ರೈತರಿಗೆ ಯೋಜನೆಯ ಬಗ್ಗೆ ಮಾಹಿತಿ ನೀಡುವಂತೆ ಸೂಚನೆ ನೀಡಿದರು.
ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದ ಇಲಾಖೆಗಳಾದ ತೋಟಗಾರಿಕೆ, ಕಂದಾಯ, ಜಿಲ್ಲಾ ಸಾಂಖ್ಯಿಕ ಇಲಾಖೆ ಮತ್ತು ಬ್ಯಾಂಕ ಸಿಬ್ಬಂಧಿಗಳಿಗೆ ಯೋಜನೆಯ ಮಾರ್ಗ ಸೂಚಿಗಳನ್ನು ಒದಗಿಸಬೇಕು. ಬೆಳೆ ಬಿತ್ತನೆ ಕ್ಷೇತ್ರವನ್ನು ಕಂದಾಯ ಮತ್ತು ಸಂಖ್ಯಿಕಾ ಇಲಾಖೆಯ ಸಮನ್ವಯದೊಂದಿಗೆ ನೀಡಿ. ಕಂದಾಯ, ಸಾಂಖ್ಯಿಕ ಇಲಾಖೆ ಮತ್ತು ಇತರ ಇಲಾಖೆಗಳೊಂದಿಗೆ ಬೆಳೆ ಕಟಾವು ಪ್ರಯೋಗಗಳನ್ನು ಕೈಗೊಳ್ಳಬೇಕು. ಬೆಳೆ ಸಾಲ ಪಡೆಯದ ರೈತರನ್ನು ಯೋಜನೆಯಡಿ ನಿಗದಿತ ದಿನಾಂಕದೊಳಗೆ ನೋಂದಾಯಿಸಬೇಕು. ಕ್ರೋಡಿಕೃತ ಪ್ರಸ್ತಾವನೆಯನ್ನು ನೋಡಲ್ ಬ್ಯಾಂಕುಗಳ ಮೂಲಕ ನಿಗದಿತ ಸಮಯದೊಳಗೆ ವಿಮಾ ಸಂಸ್ಥೆಗೆ ಕಳುಹಿಸಲು ಕ್ರಮ ವಹಿಸಿ. ವಿಮಾ ಸಂಸ್ಥೆಯಿಂದ ಪಡೆದ ಬೆಳೆ ವಿಮಾ ನಷ್ಟ ಪರಿಹಾರವನ್ನು ನಿಗದಿತ ದಿನಗಳೊಳಗೆ ರೈತರ ಖಾತೆಗೆ ಜಮಾ ಮಾಡಲು ಕ್ರಮ ವಹಿಸಬೇಕು ಎಂದು ತಿಳಿಸಿದರು.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *