Breaking News

85 ಭಾರತೀಯ ಸೈನಿಕರನ್ನು ಬಿಡುಗಡೆಗೊಳಿಸಿದ ರಷ್ಯಾ ಸೇನೆ: ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ

ನವದೆಹಲಿ: ರಷ್ಯಾ ಸೇನೆಯು ಈವರೆಗೆ ಭಾರತ ಮೂಲದ 85 ಸೈನಿಕರನ್ನು ಬಿಡುಗಡೆ ಮಾಡಿದೆ ಉಳಿದ 20 ಸೈನಿಕರನ್ನು ವಾಪಸ್‌ ಕರೆಸಿಕೊಳ್ಳುವ ಪ್ರಯತ್ನ ಮುಂದುವರಿದಿದೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ ತಿಳಿಸಿದರು.
ಬ್ರಿಕ್ಸ್‌ ಶೃಂಗಸಭೆಯ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ ಅವರೊಂದಿಗೆ ದ್ವಿಪಕ್ಷೀಯ ಸಭೆಯಲ್ಲಿ ಮಾತುಕತೆ ನಡೆಸಲಿದ್ದಾರೆ.
ಈ ಸಂದರ್ಭದಲ್ಲಿ ಉಳಿದ ಸೈನಿಕರ ವಾಪಸಾತಿ ಬಗ್ಗೆ ಚರ್ಚಿಸುವ ಸಾಧ್ಯತೆ ಇದೆ ಎಂದು ತಿಳಿಸಿದರು.
ಈ ವಿಚಾರವಾಗಿ ಭಾರತವು ರಷ್ಯಾದ ರಕ್ಷಣಾ ಸಚಿವಾಲಯದೊಂದಿಗೆ ನಿರಂತರ ಸಂಪರ್ಕದಲ್ಲಿದೆ ಎಂದು ಅವರು ತಿಳಿಸಿದರು.
ಜುಲೈನಲ್ಲಿ ಪುಟಿನ್‌ ಅವರೊಂದಿಗೆ ನಡೆಸಿದ ಮಾತುಕತೆ ಸಂದರ್ಭದಲ್ಲೂ ಪ್ರಧಾನಿ ಮೋದಿ ಅವರು ಭಾರತೀಯ ಬಿಡುಗಡೆಗೆ ಆಗ್ರಹಿಸಿದ್ದರು.

Share News

About BigTv News

Check Also

ಬಾಳೆಗೊನೆಯಲ್ಲಿ ಡ್ರಗ್ ಸಾಗಾಟ: ಪ್ರಗತಿಪರ ಯುವ ರೈತನ ಕರಾಳ ಮುಖ ಬಯಲು

ಮೈಸೂರು: ಕೇರಳದಲ್ಲಿ ಪ್ರಗತಿಪರ ಯುವ ರೈತ ಪ್ರಶಸ್ತಿ ಪಡೆದಿದ್ದ 31 ವರ್ಷದ ಧನೇಶ್ ಎಸ್. ನಾಯರ್ ಅಲಿಯಾಸ್ ಡ್ಯಾನಿ, ಮೈಸೂರಿನ …

Leave a Reply

Your email address will not be published. Required fields are marked *