Breaking News

ವಿಜಯನಗರದ ನೂತನ ಜಿಲ್ಲಾ ಆಸ್ಪತ್ರೆ ಕಟ್ಟಡ ಕಾಮಗಾರಿ ಪರಿಶೀಲಿಸಿದ ಸಚಿವ ದಿನೇಶ್ ಗುಂಡೂರಾವ್

ವಿಜಯನಗರ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ದಿನೇಶ್ ಆರ್. ಗುಂಡೂರಾವ್ ಅವರು ವಿಜಯನಗರ ಹೊಸಪೇಟೆಯಲ್ಲಿ ನಿರ್ಮಾಣವಾಗುತ್ತಿರುವ ಜಿಲ್ಲಾ ಆಸ್ಪತ್ರೆ ಕಟ್ಟಡ ಕಾಮಗಾರಿಯನ್ನು ಶಾಸಕರೊಂದಿಗೆ ಪರಿಶೀಲನೆ ನಡೆಸಿದರು.
ನೂತನ ಜಿಲ್ಲೆಯಾದ ನಂತರ ಜಿಲ್ಲಾ ಆಸ್ಪತ್ರೆ ನಿರ್ಮಾಣ ಕಾಮಗಾರಿ ನಡೆಯುತ್ತಿದೆ, ಸುಸಜ್ಜಿತ ಆಸ್ಪತ್ರೆ ಇಲ್ಲದೆ ಅಕ್ಕಪಕ್ಕದ ಜಿಲ್ಲೆಗಳಿಗೆ ಉನ್ನತ ಚಿಕಿತ್ಸೆಗಾಗಿ ತೆರಳಬೇಕಾಗಿದೆ ಆದಷ್ಟು ಬೇಗ ಜಿಲ್ಲಾಸ್ಪತ್ರೆ 300 ಹಾಸಿಗೆ ಸಾಮಥ್ರ್ಯದ ಜಿಲ್ಲಾ ಆಸ್ಪತ್ರೆ ನಿರ್ಮಾಣದವಾದರೆ ಇಲ್ಲಿಯೇ ತುರ್ತು ಚಿಕಿತ್ಸೆ, ಶಸ್ತ್ರಚಿಕಿತ್ಸೆ ಸೇರಿದಂತೆ ಇತರೆ ಚಿಕಿತ್ಸೆ ಸಿಗುವುದರಿಂದ ಜನರಿಗೆ ಅನುಕೂಲವಾಗಲಿದೆ ಎಂದರು.
ನಂತರ, ಅಧಿಕಾರಿಗಳೊಂದಿಗೆ ಮಾತನಾಡಿದ ಅವರು, ಯಾವುದೇ ದುಂದು ವೆಚ್ಚಕ್ಕೆ ಅನುವು ಮಾಡದಿರಿ ಅನಾವಶ್ಯಕವಾದ ಅಲಂಕಾರವನ್ನು ಮಾಡಬೇಡಿ. ನೈಸರ್ಗಿಕವಾಗಿ ಗಾಳಿ, ಬೇಳಕು ಹೆಚ್ಚು ಬರುವ ಹಾಗೆ ಅವಕಾಶ ಮಾಡಿ ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *