Breaking News

ಚಿತ್ರದುರ್ಗ: ಆಸ್ಪತ್ರೆಯ ಎರಡನೇ ಮಹಡಿಯಿಂದ ಬಿದ್ದು ನರ್ಸ್ ಸಾವು

ಚಿತ್ರದುರ್ಗ: ಜಿಲ್ಲೆಯಲ್ಲಿ ಆಸ್ಪತ್ರೆಯ ಎರಡನೇ ಮಹಡಿಯಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಂತ ನರ್ಸ್ ಒಬ್ಬರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವಂತ ಘಟನೆ ನಡೆದಿದೆ.
ಚಿತ್ರದುರ್ಗ ನಗರದ ಪಿವಿಎಸ್ ಖಾಸಗಿ ಆಸ್ಪತ್ರೆಯ 2ನೇ ಮಹಡಿಯಿಂದ ನರ್ಸ್ ಇಂದ್ರಮ್ಮ(36) ಕೆಳಗೆ ಬಿದ್ದಾಗ ತಲೆಗೆ ಬಲವಾದ ಪೆಟ್ಟು ಬಿದ್ದು, ಗಂಭೀರವಾಗಿ ಗಾಯಗೊಂಡಿದ್ದರು.
ಅವರನ್ನು ಬಸವೇಶ್ವರ ಮೆಡಿಕಲ್ ಆಸ್ಪತ್ರೆ ಮತ್ತು ಕಾಲೇಜಿಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ನರ್ಸ್ ಇಂದ್ರಮ್ಮ ಅವರು 2ನೇ ಮಹಡಿಯಲ್ಲಿ ವಿದ್ಯುತ್ ಸ್ಪರ್ಶದಿಂದ ಆಘಾತಗೊಂಡು ಕೆಳಗೆ ಬಿದ್ದು, ತಲೆಗೆ ಬಲವಾದ ಪೆಟ್ಟು ಬಿದ್ದಿದೆ ಎಂದು ಹೇಳಲಾಗುತ್ತಿದೆ. ಈ ಸಂಬಂಧ ಚಿತ್ರದುರ್ಗ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *