ನವದೆಹಲಿ : ದೀಪಾವಳಿ ಹಬ್ಬದ ವೇಳೆ ಆಹಾರ ಧಾನ್ಯ ಬೆಲೆ ನಿಯಂತ್ರಣಕ್ಕೆ ಮುಂದಾಗಿರುವ ಕೇಂದ್ರ ಸರ್ಕಾರ ಗ್ರಾಹಕರಿಗೆ ಎಂಆರ್ ಪಿ ದರದಲ್ಲಿ ವಿತರಿಸಲು ಮುಂದಾಗಿದೆ. ನವದೆಹಲಿಯಲ್ಲಿ ಎಂಆರ್ ಪಿ ದರದಲ್ಲಿ ಭಾರತ್ ಅಕ್ಕಿ, ಬೇಳೆ-ಕಾಳು ಪೂರೈಕೆಗೆ ಕ್ರಮ ಕೈಗೊಂಡಿದ್ದು, ಈ ಮೂಲಕ ಗ್ರಾಹಕರಿಗೆ ಬೆಲೆ ಏರಿಕೆ ಹೊರೆ ತಗ್ಗಿಸಲು ಕ್ರಮ ಕೈಗೊಂಡಿದೆ.
ಗ್ರಾಹಕರಿಗೆ ಕೈಗೆಟುಕುವ ಬೆಲೆಯಲ್ಲಿ ಭಾರತ್ ಅಕ್ಕಿ, ಬೇಳೆ-ಕಾಳನ್ನು ವಾಹನಗಳ ಮೂಲಕ ವಿತರಿಸಲು ಕೇಂದ್ರ ಸರ್ಕಾರ ಚಾಲನೆ ನೀಡಿದೆ.
ನವದೆಹಲಿಯ ಕೃಷಿ ಭವನದಲ್ಲಿ ಇಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಅವರು ಕಡಿಮೆ ದರದಲ್ಲಿ ಆಹಾರ ಧಾನ್ಯ ಪೂರೈಕೆ ವಾಹನಕ್ಕೆ ಚಾಲನೆ ನೀಡಿದರು.
ಇಂತಿದೆ ಎಂಆರ್ ಪಿ ಬೆಲೆ: ದೆಹಲಿ/ಎನ್‌ಸಿಆರ್ ನಿವಾಸಿಗಳಿಗಾಗಿ ಭಾರತ್ ಕಡಲೆ ಬೇಳೆ 70 ರೂ. ಕೆಜಿ, ಭಾರತ್ ಹೆಸರುಬೇಳೆ ಮ್ 107 ರೂ. ಕೆಜಿ ಮತ್ತು ಭಾರತ್ ತೊಗರಿಬೇಳೆ 89 ರೂ. ಕೆಜಿ ಬೆಲೆಯಲ್ಲಿ ಮಾರಟ ಮಾಡಲಾಗುತ್ತಿದೆ ಎಂದು ಕೇಂದ್ರ ಆಹಾರ ಸಚಿವ ಪ್ರಲ್ಲಾದ ಜೋಶಿ ಇದೇ ವೇಳೆ ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

