Breaking News

ಕಲಬುರಗಿಯಲ್ಲಿ ಸುಗಮ ಸುರಕ್ಷತೆಯ ಸಂಚಾರ ವ್ಯವಸ್ಥೆಗೆ ಕ್ರಮ: ಪೊಲೀಸ್ ಆಯುಕ್ತ ಡಾ.ಶರಣಪ್ಪ

ಕಲಬುರಗಿ : ನಗರದಲ್ಲಿ ಸುಗಮ ಮತ್ತು ಸುರಕ್ಷತೆಯ ಸಂಚಾರ ವ್ಯವಸ್ಥೆ ಕೈಗೊಳ್ಳುವುದಕ್ಕಾಗಿ ಅತ್ಯಾಧುನಿಕ ತಂತ್ರಜ್ಞಾನವಾದ ಸಮಗ್ರ ಸಂಚಾರ ನಿರ್ವಹಣೆ ವ್ಯವಸ್ಥೆ (ಐಟಿಎಂಎಸ್) ಮೂಲಕ ಇ – ಚಲನ್ ಮುಂದಿನ 10 ದಿನಗಳಲ್ಲಿ ಜಾರಿ ಮಾಡುವ ಉದ್ದೇಶ ಇದೆ ಎಂದು ಪೊಲೀಸ್ ಆಯುಕ್ತರಾದ ಡಾ.ಶರಣಪ್ಪ ಎಸ್.ಡಿ ಹೇಳಿದರು.
ಕಲಬುರಗಿ ಆಕಾಶವಾಣಿಯಲ್ಲಿ ಇಂದು ನಡೆಸಿದ ಫೋನ್-ಇನ್ ಕಾರ್ಯಕ್ರಮದಲ್ಲಿ ಕೇಳುಗರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಸಿಗ್ನಲ್ ವ್ಯವಸ್ಥೆ ಇದ್ದರೂ ನಿಯಮ ಉಲ್ಲಂಘನೆ ಮಾಡಿ ಸಂಚರಿಸುತ್ತಿರುವ ಮತ್ತು ಅಕ್ರಮ ಪಾರ್ಕಿಂಗ್, ಸೀಟ್ ಬೆಲ್ಟ್ ಧರಿಸದಿರುವುದು, ಸಮವಸ್ತ್ರ ಮುಂತಾದ ನಿಯಮ ಉಲ್ಲಂಘನೆಯ ತಡೆಗಾಗಿ ಸಿಸಿ ಕ್ಯಾಮೆರಾ ಕಣ್ಗಾವಲಿನೊಂದಿಗೆ ಐಟಿಎಂಎಸ್ ಆಧುನಿಕ ತಾಂತ್ರಿಕ ವ್ಯವಸ್ಥೆಯಡಿ ತಪ್ಪಿತಸ್ಥರನ್ನು ಪತ್ತೆ ಹಚ್ಚಿ ವಾಹನ ಸವಾರರ ಮನೆಗೆ ದಂಡ ಪಾವತಿಯ ರಶೀದಿ ಇ – ಚಲನ್ ಕಳುಹಿಸಿಕೊಡಲಾಗುವುದು. ಪೊಲೀಸರು ನೋಡಿಲ್ಲ ಎಂದು ತಪ್ಪಿಸಲು ಇನ್ನು ಮುಂದೆ ಸಾಧ್ಯವಿಲ್ಲ. ವಾಹನ ಸವಾರರು ಜಾಗೃತರಾಗಿ ಟ್ರಾಫಿಕ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ತಪ್ಪಿದಲ್ಲಿ ದಂಡ ಪಾವತಿ ಖಚಿತ ಎಂದು ಎಚ್ಚರಿಕೆ ನೀಡಿದರು.
ಭಾರತದಲ್ಲಿ ರಸ್ತೆ ಅಪಘಾತ ಪ್ರಕರಣಗಳಲ್ಲಿ 20 ಸಾವಿರ ಜನರು ಸಾವನ್ನಪ್ಪುತ್ತಿರುವ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಪೊಲೀಸರು ಸಾರ್ವಜನಿಕರ ರಕ್ಷಣೆಗೆ ಇದ್ದು ಜನಸ್ನೇಹಿ ಪೊಲೀಸ್ ವ್ಯವಸ್ಥೆಗಾಗಿ ಶಾಲಾ, ಕಾಲೇಜುಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಜಾಗೃತಿ ನೀಡಲಾಗುತ್ತಿದೆ. ಇದರ ಜೊತೆಗೆ ಪ್ರತಿ ಪೊಲೀಸ್ ಠಾಣೆಯಲ್ಲಿ ಪ್ರತಿ ತಿಂಗಳು ಜನ ಸಂಪರ್ಕ ಸಭೆ, ತೆರೆದ ಮನೆ ಮೂಲಕ ಸಾರ್ವಜನಿಕರಿಗೆ ಜನಸ್ನೇಹಿ ಪೊಲೀಸ್ ವ್ಯವಸ್ಥೆಯ ಮಾಹಿತಿ ನೀಡಲಾಗುತ್ತಿದೆ ಎಂದು ತಿಳಿಸಿದರು.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *