ಬೆಂಗಳೂರು : ನಗರದಲ್ಲಿ ಮಳೆಯಿಂದ ಅಪಾರ ಪ್ರಮಾಣದ ಹಾನಿ ಉಂಟಾಗಿದ್ದು, ಹಲವು ಏರಿಯಾಗಳಲ್ಲಿ ಮನೆಗಳಿಗೆ ನೀರು ನುಗ್ಗಿ ಸಾಕಷ್ಟು ನಷ್ಟ ಸಂಭವಿಸಿತ್ತು. ಹೀಗಾಗಿ ಸೂಕ್ತ ವ್ಯವಸ್ಥೆ ಕಲ್ಪಿಸದ ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.
ಇದೀಗ ಮಳೆಯಿಂದ ಉಂಟಾಗಿರುವ ಹಾನಿಗೆ ಪರಿಹಾರ ಕಲ್ಪಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಈ ಬಗ್ಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಮನೆಗೆ ನೀರು ನುಗ್ಗಿ ತೊಂದರೆ ಉಂಟಾಗಿರುವವರಿಗೆ ತಲಾ 10 ಸಾವಿರ ಪರಿಹಾರ ನೀಡಲು ನಿರ್ಧರಿಸಿದೆ ಎಂದಿದ್ದಾರೆ. ಸಾಯಿ ಲೇಔಟ್ ನಲ್ಲಿ ಈ ಬಾರಿಯೂ ಸಾಕಷ್ಟು ಹಾನಿ ಸಂಭವಿಸಿದ್ದು, ಬಡಾವಣೆಯ ಅರ್ಹ ಫಲಾನುಭವಿಗಳಿಗೆ ಪರಿಹಾರ ದೊರೆಯಲಿದೆ ಎಂದಿದ್ದಾರೆ.
ಇನ್ನು ವಸತಿ ಇಲ್ಲದವರಿಗೆ ವಾಸಿಸಲು ತಾತ್ಕಾಲಿಕ ವಸತಿ ಹಾಗೂ ಊಟದ ವ್ಯವಸ್ಥೆ ಮಾಡಿಕೊಡಲಾಗುವುದು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ.
ಜತೆಗೆ ನಗರದಾದ್ಯಂತ ಮುಲಾಜಿಲ್ಲದೆ ರಾಜಕಾಲುವೆ ಒತ್ತುವರಿ ತೆರವಿಗೆ ಸೂಚನೆ ನೀಡಲಾಗಿರುವುದಾಗಿ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

