ಕರ್ನೂಲ್: ಜಿಲ್ಲೆಯಲ್ಲಿ ತುಂಗಭದ್ರಾ ಪೈಪ್‌ಲೈನ್ ಸೋರಿಕೆಯಿಂದಾಗಿ 2 ದಿನಗಳಿಂದ ನೀರು ವ್ಯರ್ಥವಾಗುತ್ತಿದ್ದು, ಇದರಿಂದ ಸುಮಾರು 50 ಎಕರೆ ಬೆಳೆ ನೀರಿನಲ್ಲಿ ಮುಳುಗಿದೆ. ಹತ್ತಿ ಬೆಳೆ ನೀರಿನಲ್ಲಿ ಮುಳುಗಿದೆ ಇದರಿಂದ ರೈತರು ಕಂಗಾಲಾಗಿದ್ದಾರೆ.
ಕೋಸ್ಗಿ ಮಂಡಲದ ಸಾತನೂರು ಬಳಿ ಈ ಘಟನೆ ನಡೆದಿದೆ ಪುಲಿಕನುಮ ಪಂಪ್ ಹೌಸ್ನ ಪೈಪ್ ಲೈನ್ ಒಡೆದು 2 ದಿನ ಕಳೆದರೂ ಅಧಿಕಾರಿಗಳು ಗಮನ ಹರಿಸುತ್ತಿಲ್ಲ ಎಂದು ಸ್ಥಳೀಯರು ಹಾಗೂ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಪೈಪ್ ಲೈನ್ ಒಡೆದಿರುವುದರಿಂದ ಅಪಾರ ಪ್ರಮಾಣದ ನೀರು ಹೊಲಗಳಿಗೆ ಹರಿಯುತ್ತಿದೆ. ಇದರಿಂದ ಬೆಳೆ ಹಾನಿಯಾಗುವ ಸಾಧ್ಯತೆಯಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

