Breaking News

ಲಾರಿಗೆ ಟಾಟಾ ಏಸ್ ವಾಹನವೊಂದು ಡಿಕ್ಕಿ: ಕೆಲವರು ಗಾಯ

ಧಾರವಾಡ: ಮುಂದೆ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಟಾಟಾ ಏಸ್ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಕೆಲವರು ಗಾಯಗೊಂಡಿರುವ ಘಟನೆ ಹುಬ್ಬಳ್ಳಿ, ಧಾರವಾಡ ಬೈಪಾಸ್‌ ಬಳಿ ಇರುವ ಮಿಶ್ರಾ ಪೇಡಾದ ಹತ್ತಿರ ನಿನ್ನೆ ರಾತ್ರಿ ಸಂಭವಿಸಿದೆ.

ಯಲ್ಲಮ್ಮನ ಗುಡ್ಡಕ್ಕೆ ಹೊರಟಿದ್ದ ಟಾಟಾ ಏಸ್ ವಾಹನವು ಮುಂದೆ ಹೊರಟಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಟಾಟಾ ಏಸ್‌ನಲ್ಲಿ ಮೂರ್ನಾಲ್ಕು ಜನ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಆಸ್ಪತ್ರೆಗೆ ನಿನ್ನೆ ರಾತ್ರಿಯೇ ಸಾಗಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನಾ ಸ್ಥಳಕ್ಕೆ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ದೂರು ದಾಖಲಿಸಿಕೊಂಡಿದ್ದಾರೆ.

Share News

About Shaikh BigTv

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *