Breaking News

ಬೆಂಗಳೂರಿನ ಕಟ್ಟಡ ಕುಸಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಾಬು ಸಾ ಪಾಳ್ಯದಲ್ಲಿ ಕುಸಿದ ಕಟ್ಟಡದಿಂದ ಮೃತಪಟ್ಟ ಕುಟುಂಬದವರಿಗೆ ತಲಾ ₹ 5 ಲಕ್ಷ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
ಕಟ್ಟಡ ಕುಸಿತವಾಗಿರುವ ಸ್ಥಳಕ್ಕೆ ಇಂದು ಭೇಟಿ ನೀಡಿದ ಸಿದ್ದರಾಮಯ್ಯ ಅವರು, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅವರೊಬ್ಬರನ್ನು ಅಮಾನತು ಮಾಡಿದರೆ ಸಾಲದು, ಅನಧಿಕೃತವಾಗಿ ಕಟ್ಟಡ ನಿರ್ಮಾಣ ಮಾಡಲು ಅವಕಾಶ ಕೊಟ್ಟ ಐಎಎಸ್ ಅಧಿಕಾರಿ ವಲಯ ಆಯುಕ್ತ, ಕಾರ್ಯಪಾಲಕ ಎಂಜಿನಿಯರ್ ಅವರಿಗೂ ನೋಟಿಸ್ ನೀಡಲು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಸೂಚಿಸಿದರು.
ಕಾರ್ಮಿಕ ಇಲಾಖೆಯಿಂದ ತಲಾ ₹ 3 ಲಕ್ಷ, ಬಿಬಿಎಂಪಿಯಿಂದ ತಲಾ ₹ 2 ಲಕ್ಷ ಪರಿಹಾರವನ್ನು ಮೃತರ ಕುಟುಂಬಕ್ಕೆ ನೀಡಲಾಗುತ್ತದೆ. ಗಾಯಗೊಂಡವರ ಚಿಕಿತ್ಸೆ ವೆಚ್ಚವನ್ನು ಸಂಪೂರ್ಣವಾಗಿ ಇಲಾಖೆಗಳಿಂದಲೇ ಭರಿಸಲಾಗುವುದು ಎಂದರು.

Share News

About BigTv News

Check Also

ಸಹಾಯ ಮಾಡುವ ನಾಟಕವಾಡಿ ಯುವತಿಗೆ ಲೈಂಗಿಕ ದೌರ್ಜನ್ಯವೆಸೆದ ಕಾಮುಕರು!

ಯಾದಗಿರಿ ರೈಲು ನಿಲ್ದಾಣದಲ್ಲಿ 22 ವರ್ಷದ ಯುವತಿಗೆ ಸಹಾಯ ಮಾಡುವ ನೆಪದಲ್ಲಿ ಪರಿಚಯ ಮಾಡಿಕೊಂಡ ವ್ಯಕ್ತಿಯೊಬ್ಬ ಮದುವೆಯಾಗುವುದಾಗಿ ನಂಬಿಸಿ ದೌರ್ಜನ್ಯ …

Leave a Reply

Your email address will not be published. Required fields are marked *