Breaking News

ಚನ್ನಪಟ್ಟಣ ಉಪಚುನಾವಣೆ: ಕಾಂಗ್ರೆಸ್​ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ನಾಮಪತ್ರ ಸಲ್ಲಿಕೆ

ರಾಮನಗರ : ಚನ್ನಪಟ್ಟಣ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಅವರು ಇಂದು ಬೃಹತ್ ಮೆರವಣಿಗೆಯೊಂದಿಗೆ ಚನ್ನಪಟ್ಟಣದ ತಾಲೂಕು ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಅವರು ಭಾಗಿಯಾಗಿದ್ದರು.
ಇಂದು ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಸಿಪಿ ಯೋಗೇಶ್ವರ್ ಅವರು ಚನ್ನಪಟ್ಟಣದಲ್ಲಿ ಬೃಹತ್ ರೋಡ್ ಶೋ ಮುಖಾಂತರ ತಾಲೂಕು ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ. ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನರು ಸಿ.ಪಿ.ಯೋಗೇಶ್ವರನ್ನು ಆಶೀರ್ವದಿಸಿ ಬೆಂಬಲಿಸುವ ನಂಬಿಕೆಯಿದೆ. ಕಾಂಗ್ರೆಸ್ ಅಭ್ಯರ್ಥಿ ದೊಡ್ಡ ಅಂತರದಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಚನ್ನಪಟ್ಟಣ ಉಪಚುನಾವಣೆ ನಿಮಿತ್ತ ಚನ್ನಪಟ್ಟಣ ತಹಶೀಲ್ದಾರ್ ರವರ ಕಚೇರಿಯಲ್ಲಿ ಇಂದು ತಮ್ಮ ಪಕ್ಷದ ಅಭ್ಯರ್ಥಿಯಾದ ಸಿ ಪಿ ಯೋಗೇಶ್ವರ್ ರವರ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಯಲ್ಲಿ ಭಾಗವಹಿಸಿ ನಂತರ ಮಾತನಾಡಿದರು.
ಚನ್ನಪಟ್ಟಣದ ಉಪಚುನಾವಣೆಯಲ್ಲಿ ಜೆಡಿಎಸ್ ನವರು ಯಾರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡುತ್ತಾರೆ ಎನ್ನುವುದು ಮುಖ್ಯವಲ್ಲ. ಸಿ.ಪಿ. ಯೋಗೇಶ್ವರ್ ಅವರು ಕಾಂಗ್ರೆಸ್ ಪಕ್ಷದಲ್ಲಿದ್ದು, ಎರಡು ಬಾರಿ ಶಾಸಕರಾಗಿದ್ದರು. ಬಿಜೆಪಿ ಹಾಗೂ ಎನ್ ಡಿ ಎ ನಿಂದ ಅವರಿಗೆ ಅನ್ಯಾಯವಾದ ಕಾರಣ ಅವರು ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಮರಳಿದ್ದಾರೆ. ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನೊಪ್ಪಿ ಮರಳಿ ಬಂದಿರುವ ಯೋಗೇಶ್ವರ್ ನ್ನು ಇಡೀ ಕಾಂಗ್ರೆಸ್ ಪಕ್ಷ ಸ್ವಾಗತಿಸಿದೆ.
ಸಿ.ಪಿ.ಯೋಗೇಶ್ವರ ಅವರು ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಜೆಡಿಎಸ್ ಬಿಜೆಪಿಯವರು ಚನ್ನಪಟ್ಟಣ ಕ್ಷೇತ್ರಕ್ಕೆ ಯಾರನ್ನೇ ನಿಲ್ಲಿಸಿದರೂ ಕೂಡ, ಕಾಂಗ್ರೆಸ್ ನ ಅಭ್ಯರ್ಥಿಯೇ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದರು. ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಗ್ಯಾರಂಟಿ ಯೋಜನೆಗಳು ನುಡಿದಂತೆ ನಡೆಯುವ ನಮ್ಮ ಬದ್ಧತೆಯನ್ನು ತೋರಿಸುತ್ತದೆ ಎಂದರು.
ಚನ್ನಪಟ್ಟಣ ಉಪಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ಅವರು ಗುರುವಾರ ನಾಮಪತ್ರ ಸಲ್ಲಿಕೆಗೂ ಮುನ್ನ ನಡೆದ ಮೆರವಣಿಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಮಾಜಿ ಸಂಸದ ಡಿ.ಕೆ ಸುರೇಶ್, ಸಚಿವರಾದ ಬೈರತಿ ಸುರೇಶ್, ಎಂ.ಸಿ ಸುಧಾಕರ್, ಶಾಸಕರಾದ ಮಾಗಡಿ ಬಾಲಕೃಷ್ಣ, ಡಾ. ರಂಗನಾಥ್, ಕದಲೂರು ಉದಯ್, ನೆಲಮಂಗಲ ಶ್ರೀನಿವಾಸ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಹೆಚ್.ಎಂ ರೇವಣ್ಣ, ಮಾಜಿ ಶಾಸಕ ಎಂ.ಸಿ ಅಶ್ವತ್ಥ್, ವಿಧಾನ ಪರಿಷತ್ ಸದಸ್ಯರಾದ ಪುಟ್ಟಣ್ಣ, ಎಸ್ ರವಿ ಮತ್ತಿತರರು ಉಪಸ್ಥಿತರಿದ್ದರು.

Share News

About BigTv News

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *