Breaking News

ಬೆಂಗಳೂರಿನಲ್ಲಿ ಅನಧಿಕೃತ ಕಟ್ಟಡಗಳ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ನಗರದಲ್ಲಿ ನಿಯಮಬಾಹಿರವಾಗಿ ನಿರ್ಮಿಸಲಾಗಿರುವ ಕಟ್ಟಡಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟಪ್ಪಣೆ ಮಾಡಿದ್ದಾರೆ.
ಬಾಬುಸಾಪಾಳ್ಯದಲ್ಲಿ ಕಟ್ಟಡ ಕುಸಿತವಾಗಿರುವ ಸ್ಥಳಕ್ಕೆ ಭೇಟಿ ನೀಡಿದ ವೇಳೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಮುಖ್ಯಮಂತ್ರಿಗಳು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ ಗಿರಿನಾಥ್‌ ಅವರಿಗೆ ಅನಧಿಕೃತ ಕಟ್ಟಡಗಳ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಸೂಚಿಸಿದರು.
ಈ ನಿಟ್ಟಿನಲ್ಲಿ ವಿಭಾಗೀಯ ಅಧಿಕಾರಿಗೂ ನೋಟಿಸ್‌‍ ನೀಡಿ ಕ್ರಮ ಕೈಗೊಳ್ಳಬೇಕು. ಅನಧಿಕೃತ ನಿರ್ಮಾಣ ನಿಲ್ಲಿಸುವಂತೆ ನೋಟಿಸ್‌‍ ನೀಡಿದ್ದರೂ ನಿರ್ಮಾಣ ಮುಂದುವರೆಸಿದ ಮಾಲೀಕರು, ಗುತ್ತಿಗೆದಾರ, ಎಂಜಿನಿಯರ್‌ ಎಲ್ಲರ ವಿರುದ್ಧವೂ ಕಠಿಣ ಕಾನೂನು ಕ್ರಮ ಆಗಬೇಕು ಎಂದು ಎಂದು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಸಿಎಂ ಆಗ್ರಹಿಸಿದರು.
ಸಚಿವ ಬೈರತಿ ಸುರೇಶ್‌, ಎಂ.ಸಿ.ಸುಧಾಕರ್‌, ಶಾಸಕ ಬೈರತಿ ಬಸವರಾಜ್‌ ಹಾಗೂ ಬಿಬಿಎಂಪಿ ಆಯುಕ್ತರು ಮತ್ತು ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಘಟನಾ ಸ್ಥಳ ಪರಿಶೀಲನೆ ಬಳಿಕ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಅಗತ್ಯ ಇರುವ ಎಲ್ಲಾ ಆಧುನಿಕ ವ್ಯವಸ್ಥೆ ಬಳಿಕ ಕಾರ್ಮಿಕರಿಗೆ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದರು.

Share News

About BigTv News

Check Also

ವಿಜಯಪುರದಲ್ಲಿ ಮತ್ತೆ ಹರಿದ ನೆತ್ತರು, ಪತ್ನಿಯ ಎದುರಲ್ಲೇ ಅಮಾನುಷವಾಗಿ ಪತಿಯ ಜೀವ ತೆಗೆದ ರಾಕ್ಷಸರು

ವಿಜಯಪುರ: ನಗರದ ಮುಂಡೆವಾಡಿ ಆಸ್ಪತ್ರೆ ಎದುರು ಯಾಸೀನ್ ಠಕ್ಕೆ ಎಂಬಾತನ ಮೇಲೆ ದುಷ್ಕರ್ಮಿಗಳು ಎರಡು ಸುತ್ತು ಗುಂಡು ಹಾರಿಸಿ ಹತ್ಯೆ …

Leave a Reply

Your email address will not be published. Required fields are marked *