ಮಂಗಳೂರು: ಕರ್ನಾಟಕದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಗೋವಾದ ಮಾದರಿಯಲ್ಲಿ ರಾಜ್ಯದ ಬೀಚ್‌ಗಳಲ್ಲಿ ಟೆಂಟ್ಗಳನ್ನು ಹಾಕುವುದು ಮತ್ತು ಮದ್ಯ ಮಾರಾಟ, ಮದ್ಯಪಾನಕ್ಕೆ ಅನುಮತಿ ನೀಡುವ ಪ್ರಸ್ತಾವನೆಯನ್ನು ಪರಿಶೀಲಿಸಲಾಗುತ್ತಿದೆ ಎಂದು ಪ್ರವಾಸೋದ್ಯಮ ಇಲಾಖೆ ತಿಳಿಸಿದೆ.
ಮಂಗಳೂರಿನಲ್ಲಿ ನಡೆದ ಕನೆಕ್ಟ್ 2024ನಲ್ಲಿ ಮಾತನಾಡಿದ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕ ರಾಜೇಂದ್ರ ಕೆವಿ, ಬೀಚ್‌ಗಳಲ್ಲಿ ಮದ್ಯ ಬಳಕೆಯ ಮೇಲೆ ಇರುವ ನಿರ್ಬಂಧಗಳನ್ನು ಸಡಿಲಿಸುವ ಅಗತ್ಯವಿದೆ ಎಂದರು.
ಗೋವಾ ಮಾದರಿಯಲ್ಲಿ ಪ್ರವಾಸಿಗರನ್ನು ಆಕರ್ಷಿಸಲು ನಾವು ಬೀಚ್‌ಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡಬೇಕಾಗಿದೆ ಎಂದು ಅವರು ಹೇಳಿದರು.
ಬೀಚ್‌ಗಳಲ್ಲಿ ಸುರಕ್ಷತೆಯನ್ನು ಹೆಚ್ಚಿಸಲು, ಜನರು ರಾತ್ರಿಯಲ್ಲಿ ಹೆಚ್ಚು ಸಮಯ ಕಳೆಯುವಂತೆ ಮಾಡಲು ಕಡಲತೀರಗಳಲ್ಲಿ ಹೆಚ್ಚಿನ ಲೈಟ್ಗಳನ್ನು ಅಳವಡಿಸಲು ಇಲಾಖೆ ಚಿಂತನೆ ನಡೆಸಿದೆ. ರಾಜ್ಯದಲ್ಲಿ ಟೆಂಟ್ ಪ್ರವಾಸೋದ್ಯಮವನ್ನು ಉತ್ತೇಜಿಸಲು ಕಡಲತೀರಗಳ ಬಳಿ ಸರ್ಕಾರಿ ಮತ್ತು ಖಾಸಗಿ ಜಮೀನುಗಳನ್ನು ಹುಡುಕುವಂತೆ ಜಿಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

