Breaking News

ಕಳ್ಳತನದ ಪ್ರಕರಣ : ಆರೋಪಿಯನ್ನು ಬಂಧಿಸಿದ ಪೋಲಿಸರು

ಹುಬ್ಬಳ್ಳಿ: ಕಳ್ಳತನದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಳೇ ಹುಬ್ಬಳ್ಳಿಯ ಕೃಷ್ಣಾ ನಗರ ನಿವಾಸಿ ಹುಸೇನ್ ಹಸನಪ್ಪಾ ಅಂಚಟಗೇರಿ ಎಂಬಾತನನ್ನು ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ತಾರಿಹಾಳದದಲ್ಲಿ ಬಂಧಿಸಿದ್ದಾರೆ.

ಬಂಧಿತ ಕಳ್ಳನಿಂದ 70 ಸಾವಿರ ರೂಪಾಯಿ ಮೌಲ್ಯದ ಬಂಗಾರ ಹಾಗೂ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಹಳೇ ಹುಬ್ಬಳ್ಳಿ ಠಾಣೆ ಪಿಎಸ್‌ಐ ಬೆಳಗಾಂವಕರ, ಎಎಸ್‌ಐ ಹೊನ್ನಪ್ಪನವರ, ಮುಖ್ಯಪೇದೆ ಚಂದ್ರು, ಪೇದೆಗಳಾದ ಮದ್ದೀನ, ಗಿರೀಶ ಹಾಗೂ ಚನ್ನಪ್ಪ ಕಳ್ಳನನ್ನು ಬಂಧಿಸುವ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Share News

About Shaikh BigTv

Check Also

ಹಂಪಿ ಎಕ್ಸ್‌ಪ್ರೆಸ್ ರೈಲಿಗೆ ಆಕಸ್ಮಿಕ ಬೆಂಕಿ

ಬಳ್ಳಾರಿ : ಹಂಪಿ ಎಕ್ಸ್‌ಪ್ರೆಸ್ ರೈಲಿನ ಬೋಗಿಯೊಂದರಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಟು ಆತಂಕ ಸೃಷ್ಟಿಯಾದರೂ, ಅನಾಹುತ ಸಂಭವಿಸದೇ ಪ್ರಯಾಣಿಕರು ಪಾರಾದ …

Leave a Reply

Your email address will not be published. Required fields are marked *