ಧಾರವಾಡ: ಧಾರವಾಡದ ಕುಮಾರೇಶ್ವರ ನಗರದಲ್ಲಿರುವ ಕರಿಯಮ್ಮ ದೇವಿ ಜಾತ್ರೆ ಅದ್ದೂರಿಯಿಂದ ನೆರವೇರಿತು.
ಕಳೆದ ನಾಲೈದು ದಿನಗಳಿಂದ ದೇವಸ್ಥಾನದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ನೆರವೇರಿದವು. ಕೊನೆಯ ದಿನ ಪಲ್ಲಕ್ಕಿ ಉತ್ಸವ ಹಾಗೂ ದೇವಿಗೆ ಉಡಿ ತುಂಬುವ ಕಾರ್ಯ ನಡೆಯಿತು.
ಕರಿಯಮ್ಮ ದೇವಿಯ ಪಲ್ಲಕ್ಕಿಯು ಕುಮಾರೇಶ್ವರ ನಗರದ ಅನೇಕ ಬಡಾವಣೆಯಲ್ಲಿ ಸಂಚರಿಸಿ ಮರಳಿ ದೇವಸ್ಥಾನಕ್ಕೆ ಬಂದು ತಲುಪಿತು. ಪಲ್ಲಕ್ಕಿ ಉತ್ಸವದಲ್ಲಿ ಮಹಿಳಾ ಡೊಳ್ಳು ಕುಣಿತದವರು ಪಾಲ್ಗೊಂಡು ಗಮನಸೆಳೆದರು.
ಒಟ್ಟಾರೆ ಕುಮಾರೇಶ್ವರನಗರದ ಕರಿಯಮ್ಮ ದೇವಿ ದೇವಸ್ಥಾನದ ಜಾತ್ರೆ ಅದ್ಧೂರಿಯಿಂದ ನೆರವೇರಿದ್ದು, ಭಕ್ತಾಧಿಗಳಿಗೆ ದೇವಸ್ಥಾನದ ಆವರಣದಲ್ಲಿ ಅನ್ನಪ್ರಸಾದದ ವ್ಯವಸ್ಥೆಯನ್ನೂ ಮಾಡಲಾಗಿತ್ತು.
bigtvnews | Hubli Dharwad News | Kannada News | Karnataka News Hubli News | News In Hubli | Local news

