ಕೊಪ್ಪಳ: ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದ ದಲಿತರ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ 98 ಜನ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ, ಮೂವರಿಗೆ 5 ವರ್ಷ ಶಿಕ್ಷೆ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಂದು (ಅ.24) ಮಹತ್ವದ ಆದೇಶ ಹೊರಡಿಸಿದೆ.
ಅಸ್ಪೃಶ್ಯತೆ ಆಚರಣೆ, ದಲಿತರ ಮೇಲಿನ ದೌರ್ಜನ್ಯ ಕಾರಣ ಪ್ರಕರಣ ದೇಶದ ಗಮನ ಸೆಳೆದಿತ್ತು. ಗಲಭೆಗೆ ಕಾರಣರಾದ 101 ಜನರ ವಿರುದ್ಧದ ಆರೋಪ ಸಾಬೀತಾಗಿದ್ದು, ನ್ಯಾಯಾಲಯ ಅಪರಾಧಿಗಳೆಂದು ತಿಳಿಸಿದೆ, 98 ಅಪರಾಧಿಗಳಿಗೆ ಜೀವಾವಧಿ ಜೈಲು ಶಿಕ್ಷೆ ಹಾಗೂ ತಲಾ 5 ಸಾವಿರ ರೂ. ದಂಡ ವಿಧಿಸಿದೆ. ಮೂವರು ಎಸ್ಸಿ, ಎಸ್ಟಿ ವರ್ಗಕ್ಕೆ ಸೇರಿದ ಮೂವರು ಅಪರಾಧಿಗಳಿಗೆ ತಲಾ ಎರಡು ಸಾವಿರ ರೂ. ದಂಡ ಹಾಗೂ 5 ವರ್ಷ ಸಜೆ ವಿಧಿಸಲಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ನ್ಯಾಯಾಧೀಶ ಚಂದ್ರಶೇಖರ್ ಸಿ. ಅ.21ರಂದು 101 ಆರೋಪಿಗಳ ವಿರುದ್ಧ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗಳೆಂದು ಘೋಷಿಸಿದ್ದರು ಇಂದು ಶಿಕ್ಷೆ ಪ್ರಕಟಿಸಿ ಆದೇಶಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

