ಅರಸೀಕೆರೆ: ಹೋಬಳಿಯ ಸತ್ತೂರು ಕೆರೆ ಬಳಿ ಇಂದು ಸಂಜೆ ಕೆಕೆಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿ ಬಿದ್ದಿದ್ದು, ಮಹಿಳೆ ಮೃತಪಟ್ಟಿದ್ದಾರೆ, 20 ಮಂದಿ ಗಾಯಗೊಂಡಿದ್ದಾರೆ.
ಬಸ್ ದಾವಣಗೆರೆಯಿಂದ ಹರಪನಹಳ್ಳಿ ಕಡೆಗೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
ಸತ್ತೂರು ಗ್ರಾಮದ ಹನುಮಕ್ಕ (52) ಸ್ಥಳದಲ್ಲೇ ಮೃತಪಟ್ಟವರು, ಗಾಯಗೊಂಡವರನ್ನು ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಸ್‌ನಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರು ಚಾಲಕನ ಅತಿವೇಗ ಹಾಗೂ ಅಜಾಗರೂಕತೆಯ ಚಾಲನೆಯೇ ಅವಘಡಕ್ಕೆ ಕಾರಣ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದರು.
ವಿಷಯ ತಿಳಿಯುತ್ತಿದ್ದಂತೆ ನೂರಾರು ಸಾರ್ವಜನಿಕರು ಸ್ಥಳಕ್ಕೆ ಧಾವಿಸಿ, ಬಸ್‌ನೊಳಗೆ ಸಿಲುಕಿದವರನ್ನು ಹೊರಗೆ ತರಲು ಸಹಕರಿಸಿದರು ಅರಸೀಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

