Breaking News

ಸರ್ಕಾರಕ್ಕೆ ಕಣ್ಣಿದ್ದೂ ಕುರುಡಾಗಿದೆ : ಶಂಕರ ಪಾಟೀಲ ಮುನೇನಕೊಪ್ಪ

ನವಲಗುಂದ: ತಾಲೂಕಿನಾದ್ಯಂತ ಹಲವಾರು ದಿನಗಳಿಂದ ಸತತವಾಗಿ ಸುರಿದ ಮಳೆಗೆ ರೈತರು ಬೆಳೆದಂತಹ ಬೆಳೆಗಳು ಸಂಪೂರ್ಣವಾಗಿ ನಾಶವಾಗಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.ಅತಿಯಾದ ಮಳೆಯಿಂದ ಮನೆಗಳಿಗೆ ನೀರು ನುಗ್ಗಿ ಗೋಡೆಗಳು ನೆನೆದು ಸಾವಿರಾರು ಮನೆಗಳು ಕುಸಿದು ಬಿದ್ದಿವೆ. ಈ ಸಂಕಷ್ಟದ ಸ್ಥಿತಿಯಲ್ಲಿ ರಾಜ್ಯ ಸರ್ಕಾರ ರೈತರ ನೆರವಿಗೆ ಬರಬೇಕಾಗಿತ್ತು. ಆದರೆ, ಸರ್ಕಾರಕ್ಕೆ ಕಣ್ಣಿದ್ದೂ ಕುರುಡಾಗಿದೆ ಎಂದು ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಹೇಳಿದರು.

ಬಿಜೆಪಿ ಪಕ್ಷದ ವತಿಯಿಂದ ಮಳೆಯಿಂದಾದ ಹಾನಿಗೆ ಪರಿಹಾರ ನೀಡುವಂತೆ ಒತ್ತಾಯಿಸಿ, ಪಟ್ಟಣದ ಲಿಂಗರಾಜ ವೃತ್ತದಿಂದ ಮಿನಿ ವಿಧಾನಸೌಧದವರೆಗೆ ಪ್ರತಿಭಟನೆ ನಡೆಸಿ, ಮುಖ್ಯಮಂತ್ರಿಗಳಿಗೆ ತಹಶೀಲ್ದಾರ್ ಸುಧೀ‌ರ್ ಸಾವುಕಾರ ಮುಖಾಂತರ ಮನವಿ ನೀಡಿ ಮಾತನಾಡಿದರು.

ಸ್ಥಳೀಯ ಆಡಳಿತ ಗಾಢ ನಿದ್ರೆಯಲ್ಲಿದೆ. ಕ್ಷೇತ್ರದ ಶಾಸಕರು ಇಂತಹ ಪರಿಸ್ಥಿತಿಯಲ್ಲಿ ಜನರ ಜೊತೆಯಿದ್ದು, ಧೈರ್ಯ ತುಂಬಿ ಅವರಿಗೆ ಪರಿಹಾರ ಕಲ್ಪಿಸಿ ಕೊಡುವುದು ಅವರ ಕರ್ತವ್ಯ. ಆದರೆ, ಅದನ್ನು ಮರೆತು ಶಾಸಕರು ನಾಪತ್ತೆಯಾಗಿದ್ದಾರೆ ಎಂದರು. ಸರಕಾರ ನಮ್ಮ ಮನವಿಗೆ ಸಂದಿಸದೇ ಹೋದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗು ಎಚ್ಚರಿಕೆ ನೀಡಿದರು.

Share News

About Shaikh BigTv

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *