ಹುಬ್ಬಳ್ಳಿ : ರಾಜ್ಯದ ಮೂರು ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಾರೆ ಎಂದು ಮಾಜಿ ಸಿಎಂ ಹಾಗೂ ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ವಿಶ್ವಾಸ ವ್ಯಕ್ತಪಡಿಸಿದರು.
ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದ ಅಭ್ಯರ್ಥಿಯಾಗಿ ಯಾರೇ ನಿಂತರು ಸಹ ಗೆಲುವು ಖಚಿತ. ಚನ್ನಪಟ್ಟಣದಲ್ಲಿ ಸಹ ಕುಮಾರಸ್ವಾಮಿ ಅವರ ಮಗ ಬಂದ ಕಾರಣ ಅಲ್ಲಿಯೂ ಸಹ ನಿಖಿಲ್ ಕುಮಾರಸ್ವಾಮಿ ಗೆಲುತ್ತಾರೆಂಬ ವಿಶ್ವಾಸವಿದೆ ಎಂದರು.
ಇನ್ನೂ ಕುಟುಂಬ ರಾಜಕಾರಣ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಕೇಂದ್ರದಲ್ಲಿ ಸಂಸದ ಬಸವರಾಜ ಬೊಮ್ಮಾಯಿ ಅವರು ಯಾವುದೇ ಕಾರಣಕ್ಕೆ ತಮ್ಮ ಮಗನಿಗೆ ಟಿಕೆಟ್ ಬೇಡಾ ಎಂದು ತಿಳಿಸಿದ್ದಾರೆ. ಆದರೆ ಕೇಂದ್ರದ ನಾಯಕರೇ ರಿಪೋರ್ಟ್ ಆಧಾರದ ಮೇಲೆ ಗೆಲ್ಲುವ ಅಭ್ಯರ್ಥಿ ಭರತ್ ಬೊಮ್ಮಾಯಿ ಅವರನ್ನು ಬಸವರಾಜ ಬೊಮ್ಮಾಯಿ ಅವರ ಅಭಿಪ್ರಾಯ ಕೇಳದೇ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದ್ದಾರೆ ಎಂದು ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

