Breaking News

ಮರಕುಂಬಿ ಜಾತಿ ಸಂಘರ್ಷ ಪ್ರಕರಣ: ಅಸ್ವಸ್ಥಗೊಂಡಿದ್ದ ಅಪರಾಧಿ ಸಾವು

ಕೊಪ್ಪಳ: ಗಂಗಾವತಿ ತಾಲ್ಲೂಕಿನ ಮರಕುಂಬಿ ಗ್ರಾಮದಲ್ಲಿ ಹತ್ತು ವರ್ಷಗಳ ಹಿಂದೆ ನಡೆದಿದ್ದ ಜಾತಿ ಸಂಘರ್ಷ ಪ್ರಕರಣದಲ್ಲಿ ಅಪರಾಧಿಯಾಗಿದ್ದ ರಾಮಣ್ಣ ಲಕ್ಷ್ಮಣ ಭೋವಿ ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 101 ಜನ ಅಪರಾಧಿಗಳ ಪೈಕಿ 98 ಜನರಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ ₹5,000 ದಂಡ ವಿಧಿಸಲಾಗಿದೆ.
ಇನ್ನುಳಿದ ಮೂವರಿಗೆ ಐದು ವರ್ಷ ಜೈಲು ಹಾಗೂ ತಲಾ ₹2,000 ದಂಡ ವಿಧಿಸಿ ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸೆಷೆನ್ಸ್‌ ನ್ಯಾಯಾಲಯ ಗುರುವಾರ ಆದೇಶ ನೀಡಿತ್ತು. 100 ಜನರನ್ನು ಬಳ್ಳಾರಿ ಜೈಲಿಗೆ ಗುರುವಾರ ರಾತ್ರಿಯೇ ಕಳುಹಿಸಲಾಗಿದೆ.
ಅನಾರೋಗ್ಯದಿಂದ ಬಳಲುತ್ತಿದ್ದ ರಾಮಣ್ಣ ಭೋವಿ ಅವರನ್ನು ನಿನ್ನೆ ಜಿಲ್ಲಾ ನ್ಯಾಯಾಲಯಕ್ಕೆ ಕರೆದುಕೊಂಡು ಬಂದಾಗ ಅಸ್ವಸ್ಥರಾಗಿದ್ದರು ಅಲ್ಲಿಯೇ ಚಿಕಿತ್ಸೆ ನೀಡಲಾಗಿತ್ತು. ನ್ಯಾಯಾಲಯದ ಶಿಕ್ಷೆ ಆದೇಶ ಪ್ರಕಟವಾದ ಬಳಿಕ ರಾಮಣ್ಣ ಅವರನ್ನು ನ್ಯಾಯಾಲಯದಿಂದ ನೇರವಾಗಿ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದ್ದು, ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ ಎಂದು ಪೊಲೀಸ್‌ ಮೂಲಗಳು ಖಚಿತಪಡಿಸಿವೆ.
ಅಪರಾಧಿಯಾಗಿದ್ದ ವ್ಯಕ್ತಿ ಮೃತಪಟ್ಟಿದ್ದಾರೆ ಈ ಕುರಿತು ಜೈಲು ಅಧೀಕ್ಷಕರು ದೂರು ನೀಡಲಿದ್ದಾರೆ ನಮ್ಮ ಅಧಿಕಾರಿಗಳು ಮಾಹಿತಿ ಸಂಗ್ರಹಿಸುತ್ತಿದ್ದಾರೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ರಾಮ್‌ ಎಲ್‌. ಅರಸಿದ್ಧಿ ತಿಳಿಸಿದ್ದಾರೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *