ನವದೆಹಲಿ: ಕೇಂದ್ರ ಸರ್ಕಾರದ ಎನ್ ಡಿಎ ಮಿತ್ರ ಪಕ್ಷಗಳಿರುವ ರಾಜ್ಯಗಳಿಗೆ ಬಂಪರ್ ಗಿಫ್ಟ್ ಸಿಕ್ಕಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕ್ಯಾಬಿನೆಟ್ ಬಿಹಾರ ಮತ್ತು ಆಂಧ್ರ ಪ್ರದೇಶದ 2 ರೈಲ್ವೆ ಯೋಜನೆಗಳಿಗೆ ಅನುಮೋದನೆ ಕೊಟ್ಟಿದೆ.
ಅಮರಾವತಿ ರೈಲ್ವೆ ಯೋಜನೆಯು 87 ಕಿಮೀ ರೈಲುಮಾರ್ಗ ನಿರ್ಮಿಸುವ ಯೋಜನೆ ಹೊಂದಿದೆ. ಸುಮಾರು 2,245 ಕೋಟಿ ರೂ. ವೆಚ್ಚದಲ್ಲಿ ಈ ಯೋಜನೆ ಕೈಗೆತ್ತಿಕೊಳ್ಳಲಾಗಿದೆ.
2ನೇ ಯೋಜನೆಯು ಉತ್ತರ ಬಿಹಾರ ಮತ್ತು ಈಶಾನ್ಯ ರಾಜ್ಯಗಳ ನಡುವಿನ ಸಂಪರ್ಕ ಹೆಚ್ಚಿಸುವ ಗುರಿ ಹೊಂದಿದೆ, ಇದು 256 ಕಿಮೀ ಉದ್ದದ ರೈಲು ಮಾರ್ಗ ನಿರ್ಮಿಸುವ ಯೋಜನೆಯಾಗಿದೆ. ಡಬಲ್ ಲೈನ್ ರೈಲು ಮಾರ್ಗ ಇದಾಗಿದ್ದು, 4,553 ಕೋಟಿ ರೂ. ವೆಚ್ಚ ತಗುಲಲಿದೆ ಎಂದು ಅಂದಾಜಿಸಲಾಗಿದೆ.
ಎರಡೂ ಯೋಜನೆಗಳಿಗೆ 6,798 ಕೋಟಿ ರೂ. ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದ್ದು, ಪ್ರಧಾನಿ ಮೋದಿ ನೇತೃತ್ವದ ಕ್ಯಾಬಿನೆಟ್ ಸಮಿತಿ ಗ್ರೀನ್ ಸಿಗ್ನಲ್ ಕೊಟ್ಟಿದೆ. ಕೃಷಿ ಉತ್ಪನ್ನಗಳು, ರಸಗೊಬ್ಬರ, ಕಲ್ಲಿದ್ದಲು, ಕಬ್ಬಿಣದ ಅದಿರು, ಉಕ್ಕು ಮತ್ತು ಸಿಮೆಂಟ್ ಸೇರಿದಂತೆ ಹಲವು ಸರಕುಗಳನ್ನು ಸಾಗಿಸಲು ಈ ಮೂಲಕ ಹೊಸ ಮಾರ್ಗ ಸಿಕ್ಕಂತಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

