ಹುಬ್ಬಳ್ಳಿ: ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯ ನೇಕಾರ ನಗರದ ನಿವಾಸಿ ಫಯಾಜ್ ತೂರೆವಾಲೆ ಎಂಬಾತನನ್ನು ಬೆಂಡಿಗೇರಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯಿಂದ 2 ಲಕ್ಷ 25 ಸಾವಿರ ಮೌಲ್ಯದ ವಿವಿಧ ಕಂಪನಿಗಳ 6 ಬೈಕ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಬೆಂಡಿಗೇರಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಎಸ್.ಆರ್.ನಾಯಕ, ಪಿಎಸ್ಐ ರವಿ ವಡ್ಡರ್ ಹಾಗೂ ಸಿಬ್ಬಂದಿಗಳಾದ ಸಿ.ಎಫ್.ಅಂಬಿಗೇರ, ಎನ್.ಐ. ನೀಲಗಾರ, ಹನುಮಂತ ಕರಗಾಂವಿ, ಆರ್.ಎಸ್.ಹರಕಿ, ಬಿ.ಎಸ್.ಗಳಗಿ, ಆರ್.ಎಚ್. ಹಿತ್ತಲಮನಿ, ಎಸ್.ಎಸ್.ಮೇಟಿ, ಜಿ.ವಿ.ವಗ್ಗಣ್ಣವರ ತಂಡದ ಕಾರ್ಯವೈಖರಿಯನ್ನು ಪೊಲೀಸ್ ಆಯುಕ್ತರು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಶ್ಲಾಘಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

