ಹುಬ್ಬಳ್ಳಿ: ಬಿಜೆಪಿಯಿಂದ 8 ಶಾಸಕರು ಅಷ್ಟೇ ಅಲ್ಲ, ಇನ್ನಷ್ಟು ಶಾಸಕರು ಕಾಂಗ್ರೆಸ್‌ಗೆ ಬರಬಹುದು. ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಶಾಸಕರು ಬೇಸತ್ತು ಹೋಗಿದ್ದಾರೆಂದು ಸಚಿವ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದರು.
ಹುಬ್ಬಳ್ಳಿಯಲ್ಲಿ ನಾತನಾಡಿದ ಅವರು, ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಕಾರ್ಯಕರ್ತರಷ್ಟೇ ಅಲ್ಲ ಶಾಸಕರು, ಜನರು ಕೂಡ ಬೇಸತ್ತಿದ್ದಾರೆ. ಪ್ರಜಾಸತ್ತಾತ್ಮಕ ಸರಕಾರ ಬುಡಮೇಲು ಮಾಡಲು ಹೊರಟಿದ್ದಾರೆ. ದ್ವೇಷದ ರಾಜಕಾರಕ್ಕೆ ಜನರೇ ಪಾಠ ಕಲಿಸಲಿದ್ದಾರೆ. ಹೀಗಾಗಿಯೇ ಅಲ್ಲಿನ ಶಾಸಕರು ಪಕ್ಷಕ್ಕೆ ಬರಬಹುದು. ಕಾಂಗ್ರೆಸ್ ಪಕ್ಷದ ಪರವಾಗಿ ಒಲವು ವ್ಯಕ್ತವಾಗುತ್ತಿದೆ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

